‘ಜಿಪಂ-ತಾಪಂ ಚುನಾವಣೆ ಮುಂದೂಡುವ ಪ್ರಶ್ನೆಯೇ ಇಲ್ಲ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮಾ.22- ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಜಿಪಂ ,ತಾಪಂ ಚುನಾವಣೆ ಮುಂದೂಡುವ ಪ್ರಶ್ನೆಯೇ ಇಲ್ಲ. ನಿಗದಿತ ಸಮಯಕ್ಕೆ ನಡೆಯಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಸಭೆಗೆ ತಿಳಿಸಿದರು. ಶೂನ್ಯವೇಳೆಯಲ್ಲಿ ಶಾಸಕ ಸುನೀಲ್‍ಕುಮಾರ್ ಪ್ರಸ್ತಾಪಿಸಿದ ವೇಳೆ ಮಧ್ಯಪ್ರವೇಶಿಸಿದ ಸಚಿವರು, ಎಂಥದ್ದೇ ಸಂದರ್ಭದಲ್ಲೂ ಜಿಪಂ, ತಾಪಂ ಚುನಾವಣೆ ಮುಂದೂಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ.

ಈಗಾಗಲೇ ಅಧಿಕಾರ ಅವಧಿ ಮುಗಿದಿದೆ. ಜಿಲ್ಲಾಧಿಕಾರಿಗಳು ಕ್ಷೇತ್ರ ಮರುವಿಂಗಡಣೆ, ಮೀಸಲಾತಿ ಸೇರಿದಂತೆ ಮತ್ತಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದರು. ಸರ್ಕಾರಕ್ಕೆ ಚುನಾವಣೆ ಮುಂದೂಡುವ ಇಚ್ಛೆಯೂ ಇಲ್ಲ. ನಾವು ಅಧಿಕಾರ ಅವಧಿ ಮುಗಿಯುತ್ತಿದ್ದಂತೆ ಚುನಾವಣೆ ನಡೆಸಲು ಸಿದ್ದರಾಗಿದ್ದೇವೆ.

ಈಗಾಗಲೇ ಆಯೋಗಕ್ಕೂ ಕೂಡ ಇದೇ ಅಭಿಪ್ರಾಯವನ್ನು ತಿಳಿಸಿದ್ದೇವೆ. ಬಹುತೇಕ ಎಲ್ಲ ಶಾಸಕರ ಅಭಿಪ್ರಾಯವೂ ಇದೇ ಆಗಿದೆ ಎಂದರು. ಮಾಜಿ ಸಚಿವರಾದ ಎಚ್.ಕೆ.ಪಾಟೀಲ್ ಅವರು ಚುನಾವಣೆಯನ್ನು ಸರ್ಕಾರ ಮುಂದೂಡುತ್ತದೆ ಎಂಬ ಭಾವನೆಯಲ್ಲಿ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ನಾವು ಮುಂದೂಡುವುದಿಲ್ಲ. ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ಘೋಷಣೆ ಮಾಡಿದರೂ ತಮ್ಮದೇನೂ ಅಭ್ಯಂತರವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಪ್ರಸ್ತುತ ಮಾರ್ಗಸೂಚಿಯಲ್ಲಿ ಮಾತ್ರ ಗೊಂದಲ ಇರುವುದರಿಂದ ಇದನ್ನು ಸರಿಪಡಿಸಬೇಕೆಂಬುದು ನಮ್ಮ ನಿಲುವು, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಅನೇಕ ವ್ಯತ್ಯಾಸಗಳಾಗಿವೆ. ಕೆಲವು ಕಡೆ ಕಡಿಮೆಯಾದರೆ ಇನ್ನು ಕೆಲವು ಕಡೆ ಏರಿಕೆಯಾಗಿವೆ. ಒಂದು ಕ್ಷೇತ್ರಕ್ಕೆ ಜನಸಂಖ್ಯೆಯನ್ನು ಹೆಚ್ಚಳ ಮಾಡಿದ್ದರೆ, ಇನ್ನು ಕೆಲವು ಕ್ಷೇತ್ರಗಳಿಗೆ ಕಡಿಮೆ ಮಾಡಿದ್ದಾರೆ. ನಮ್ಮ ಕೋರಿಕೆ ಎಂದರೆ ಮಾರ್ಗಸೂಚಿಯಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರಿಪಡಿಸಿ ಚುನಾವಣೆ

Facebook Comments