ಸಂತ್ರಸ್ಥರ ನೆರವಿಗೆ ಬದ್ಧ : ಕೆ.ಎಸ್.ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ,ಆ.21- ನೆರೆ ಸಂತ್ರಸ್ಥರ ನೆರವಿಗೆ ಸರ್ಕಾರ ಬದ್ಧ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಹಿಂದೆಂದೂ ಕಂಡರಿಯದ ಪ್ರವಾಹ ಸಂಭವಿಸಿದೆ. ಹೀಗಾಗಿ ಈ ಗೋವಿಂದ ಕಾರಜೋಳ ಹಾಗೂ ನಾನು ಬಾಗಲಕೋಟೆ ವಿಜಯಪುರ ಜಿಲ್ಲೆಗಳಿಗೆ ಪ್ರವಾಸ ಮಾಡಲಿದ್ದೇವೆ ಎಂದರು.

ನೆರೆ ಸಂತ್ರಸ್ಥರ ನೆರವಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ 1029 ಕೋಟಿ ರೂ. ಕೇಂದ್ರದಿಂದ ಬಿಡುಗಡೆಯಾಗಿದೆ. ಇನ್ನೂ ಹೆಚ್ಚಿನ ಪರಿಹಾರ ಕೇಂದ್ರದಿಂದ ಬಿಡುಗಡೆಯಾಗುವ ಭರವಸೆಯಿದೆ. ಈ ಬಗ್ಗೆ ಕೇಂದ್ರಕ್ಕೆ ಈಗಾಗಲೇ ಮನವಿ ಮಾಡಲಾಗಿದೆ ಎಂದ ಅವರು, ಕಾಂಗ್ರೆಸ್ ಸುಖಾಸುಮ್ಮನೆ ಆರೋಪ ಮಾಡುತ್ತಿದೆ ಎಂದರು.

ಸಚಿವ ಸ್ಥಾನ ತಪ್ಪಿದ್ದರಿಂದ ಕೆಲವರಿಗೆ ಅಸಮಾಧಾನವಿರುವುದು ನಿಜ. ಅವರನ್ನು ಸಮಾಧಾನಪಡಿಸುತ್ತೇವೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರು ನಮಗೆ ಬೆಂಬಲ ಕೊಟ್ಟಿದ್ದಾರೆ. ಅವರಿಗೂ ಕೆಲವು ಸ್ಥಾನಗಳನ್ನ ಮೀಸಲಿಟ್ಟಿದ್ದೇವೆ. ಎಲ್ಲರನ್ನೂ ಸಮಾಧಾನ ಮಾಡುವ ಕೆಲಸ ಮಾಡಲಿದ್ದೇವೆ ಎಂದರು.

Facebook Comments