‘ದೇಶವೇ ಮೆಚ್ಚುವಂತೆ ಕರ್ನಾಟಕ ಕೊರೊನಾ ನಿಯಂತ್ರಣದಲ್ಲಿ ಯಶಸ್ವಿಯಾಗಿದೆ’ : ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಮೇ 21- ದೇಶದಲ್ಲೇ ಮೆಚ್ಚುವ ರೀತಿಯಲ್ಲಿ ಕರ್ನಾಟಕವು ಕೊರೊನಾ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗುತ್ತಿದೆ ಎಂದು ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ನಗರದ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರೋಧ ಪಕ್ಷಗಳವರು ಟೀಕಿಸುತ್ತಾರೆ. ಆದರೆ ಇಡೀ ವಿಶ್ವದ ಜನ ಮೆಚ್ಚಿದ್ದಾರೆ.

ಕೋವಿಡ್-19 ನಿಯಂತ್ರಿಸುವಲ್ಲಿ ಭಾರತ ಯಶಸ್ವಿಯಾಗಿದೆ. ಇದಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಹೇಳಿದರು. ಕೋವಿಡ್ ಸಂಕಷ್ಟಕ್ಕಾಗಿ ಪ್ರಧಾನಿ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿರುವುದರಿಂದ ನರೇಗಾ ಯೋಜನೆಯಡಿ 100 ದಿನಗಳ ಬದಲು 150 ದಿನಗಳು ಕೆಲಸ ನಡೆಯುತ್ತಿವೆ.

ಹಾಗಾಗಿ ವಿರೋಧ ಪಕ್ಷಗಳವರು ಟೀಕೆ ಮಾಡುವುದಾದರೆ ಮಾಡಿಕೊಳ್ಳಲಿ ಅದರಲ್ಲೇ ಅವರಿಗೆ ಆನಂದ ಕಂಡರೆ ನಮ್ಮ ಅಭ್ಯಂತರವಿಲ್ಲ ಎಂದರು. ಕೊರೊನಾ ನಿಯಂತ್ರಿಸುವಲ್ಲಿ ಇಡೀ ದೇಶವನ್ನೇ ಕೇಂದ್ರ ಸರ್ಕಾರ ಯಾಮಾರಿಸುತ್ತಿದೆ ಎಂದು ಪ್ರತಿಪಕ್ಷಗಳು ಹೇಳುತ್ತಿವೆಯಲ್ಲ ಎಂಬ ವರದಿಗಾರರ ಪ್ರಶ್ನೆಗೆ ಇದು ಬೋಗಸ್ ವಿರೋಧ ಪಕ್ಷದ ನಾಯಕರ ಹೇಳಿಕೆ. ಅವರು ಆ ಸ್ಥಾನಗಳಿಗೆ ಅಯೋಗ್ಯ ಎಂದು ಈಶ್ವರಪ್ಪ ಗುಡುಗಿದರು.

ಮುಖ್ಯಮಂತ್ರಿಯಾಗಿದ್ದವರಿಗೆ ಅನುಮತಿ ಇಲ್ಲದೆ ಪ್ರತಿಭಟನೆ ಮಾಡಬಾರದು ಎಂಬುದು ಗೊತ್ತಿಲ್ಲವೇ ಎಂದು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು. ಸಂಸದ ಪ್ರತಾಪ್‍ಸಿಂಹ, ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook Comments

Sri Raghav

Admin