ಎಸ್‌ಎಸ್‌ಎಲ್‌ಸಿ ಮುಗಿಸಿದವರಿಗೆ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ(ಕೆಎಸ್‌ಪಿ)ಯಲ್ಲಿ ಖಾಲಿ ಇರುವ 1013 ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 17-10-2019ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್‌ಪಿ)ಯಲ್ಲಿ ಖಾಲಿ ಇರುವ 1013 ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಥವಾ ಸಮಾನತೆಯನ್ನು ಪೂರೈಸಿದ ಅರ್ಜಿದಾರರು.  18 ರಿಂದ 27 ವರ್ಷಗಳು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಮತ್ತು ಓಬಿಸಿ (2ಎ,2ಬಿ,3ಎ ಮತ್ತು 3ಬಿ) ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ,ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜೂನ್ 19-10-2019 ರೊಳಗೆ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ: ಬರಹ ಪರೀಕ್ಷೆ, ಭೌತಿಕ ಸಹಿಷ್ಣು ಪರೀಕ್ಷೆ ಮತ್ತು ದಕ್ಷತೆ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ  ಈ ‌ಗೆ ಭೇಟಿ ನೀಡಿ : https://www.ksp.gov.in/

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ