ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಟಿಕೆಟ್‍ಗಳಲ್ಲಿ ಕೋವಿಡ್ ಜಾಗೃತಿ ಸಂದೇಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.21- ಮಹಾಮಾರಿ ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳ ಎಲ್‍ಇಡಿ ಪರದೆಗಳಲ್ಲೂ ಜಾಗೃತಿ ಮೂಡಿಸುವ ಸಂದೇಶವನ್ನು ನೀಡುತ್ತಿದೆ.

ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಹರಡುವಿಕೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸಂದೇಶಗಳನ್ನು ನೀಡಲಾಗುತ್ತಿದೆ. ಮಾಸ್ಕ್ ಧರಿಸಿ, ದೈಹಿಕ ಅಂತರ ಪಾಲಿಸಿ, ಕೈಗಳ ಸ್ವಚ್ಛತೆ ಕಾಪಾಡಿ, ಆರಂಭಿಕ ಕೋವಿಡ್ ಪರೀಕ್ಷೆಯು ಜೀವ ಉಳಿಸುತ್ತದೆ ಎಂಬ ಸಂದೇಶ ನೀಡಲಾಗುತ್ತಿದೆ.

ಇದಲ್ಲದೆ ಬಸ್‍ಗಳಲ್ಲಿ ಪ್ರಯಾಣಿಕರಿಗೆ ನೀಡುವ ಟಿಕೆಟ್‍ಗಳಲ್ಲೂ ಈ ರೀತಿಯ ಜಾಗೃತಿ ಸಂದೇಶಗಳನ್ನು ಮುದ್ರಿಸಲಾಗಿದೆ ಎಂದು ಕೆಎಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ.

Facebook Comments