ನಿಷ್ಠಾವಂತ ಸಿಬ್ಬಂದಿಗಳ ರಕ್ಷಣೆಗೆ ಬದ್ಧ: ಕೆಎಸ್‌ಆರ್‌ಟಿಸಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.19-ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗಳ ಮೇಲೆ ಹಲ್ಲೆ ಹಾಗೂ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸುವ ದುಷ್ಕರ್ಮಿಗಳು ಕಠಿಣ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಕರ್ತವ್ಯಕ್ಕೆ ಹಾಜರಾಗುವ ನಮ್ಮ ನಿಷ್ಠಾವಂತ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ನೀಡಲಾಗುವುದುಎಂದು ಕೆಎಸ್‌ಆರ್‌ಟಿಸಿ ಅಧಿಕೃತ ಪ್ರಕಟಣೆ ತಿಳಿಸಿದೆ.

ಬಸ್ಸುಗಳ ಕಾರ್ಯಾಚರಣೆಯಲ್ಲಿನ ಏರಿಕೆಯಿಂದಾಗಿ ಮುಷ್ಕರ ನಿರತರು ವಿಚಲಿತರಾಗಿದ್ದಾರೆ. ನಿಷ್ಠಾವಂತ ಸಿಬ್ಬಂದಿಗಳ ಮೇಲೆ ಹಲ್ಲೇ , ಬಸ್ಸುಗಳಿಗೆ ಕಲ್ಲು ಹೊಡೆಯುವುದನ್ನು ಹೆಚ್ಚು ಮಾಡುತ್ತಿದ್ದಾರೆ ಎಂದು ಆರೋಪಿಸಿದೆ. ಈ ಸಂಬಂಧ ಈಗಾಗಲೇ ಹಲವು ಮಂದಿಯನ್ನು ಪೊಲೀಸರು ಬಂಧಿಸಿ ಕಠಿಣ ಕ್ರಮ ಜರುಗಿಸುತ್ತಿದ್ದಾರೆ.

ಇಂದು ಬೆಳಗ್ಗೆ ನಿಗಮದ ಮೂರು ಬಸ್ಸುಗಳಿಗೆ ಕನಕಪುರ- ಹಾರೋಹಳ್ಳಿ ಮಾರ್ಗದಲ್ಲಿ ಕಲ್ಲು ಹೊಡೆದಿದ್ದು, ಕರ್ತವ್ಯಕ್ಕೆ ಬರುತ್ತಿದ್ದ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೇ ಮಾಡಿದ್ದಾರೆ. ಎಂದು ತಿಳಿಸಿದೆ.

ಇದುವರೆಗೂ ನಾಲ್ಕು ಸಾರಿಗೆ ಸಂಸ್ಥೆಗಳ 109 ಬಸ್‍ಗಳಿಗೆ ಹಾನಿಯಾಗಿದೆ. 95 ಮಂದಿಯನ್ನು ಬಂಧಿಸಲಾಗಿದೆ. ಒಟ್ಟು 174 ಎಫ್‍ಐಆರ್ ದಾಖಲಿಸಲಾಗಿದ್ದು, ಸಿಬ್ಬಂದಿ ಮೇಲೆ ಹಲ್ಲೆ ಹಾಗೂ ಬಸ್‍ಗಳ ಮೇಲಿನ ಕಲ್ಲು ತೂರಾಟದಂತಹ ಘಟನೆಗಳಲ್ಲಿ 411 ಮಂದಿ ಭಾಗಿಯಾಗಿದ್ದಾರೆ ಎಂದು ಹೇಳಿದೆ.

Facebook Comments