ದೀಪಾವಳಿ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1,600 ಹೆಚ್ಚುವರಿ ಬಸ್ ವ್ಯವಸ್ಥೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.19-ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ಸಾರಿಗೆ ನಿಗಮ 1,600 ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಅ.25, 26 ಮತ್ತು 27ರಂದು ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ವಿಶೇಷ ಬಸ್‍ಗಳು ಸಂಚರಿಸಲಿವೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್ ಬೀದರ್ ಮುಂತಾದ ಸ್ಥಳಗಳಿಗೆ ಬಸ್ ಸಂಚಾರ ಮಾಡಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ ಕುಶಾಲನಗರ,ಮಡಿಕೇರಿ ಮಾರ್ಗದ ಕಡೆ ಬಸ್ ಹೊರಡಲಿವೆ. ಬೆಂಗಳೂರು ನಗರದ ಬಸವೇಶ್ವರ ಬಸ್ ನಿಲ್ದಾ ವಿಜಯನಗರ, ಜಯನಗರ, 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರಂ 18ನೇ ಅಡ್ಡರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್ ಗಂಗಾನಗರ ಹಾಗೂ ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಹ್ಮಣ್ಯ ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಇದೆ.

ತಮಿಳುನಾಡ ಮತ್ತು ಆಂಧ್ರಪ್ರದೇಶ/ ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ,ಚೆನ್ನೈ,ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2ರಿಂದ ವಿಶೇಷ ವ್ಯವಸ್ಥೆ ಲಭ್ಯವಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡವಾಗಿ ಆಸನಗಳನ್ನು ಕಾಯ್ದಿರುವ ಸೌಲಭ್ಯಗನ್ನು ಕಲ್ಪಿಸಲಾಗಿದ್ದು , ನಾಲ್ಕು ಥವಾಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದ್ದಲ್ಲಿ ಶೇ. 5 ರಿಯಾಯ್ತಿ ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ವಾಪಸ್ಸಾಗುವ ಪ್ರಯಾಣ ದರದಲ್ಲಿ ಶೇ.10 ರಿಯಾಯ್ತಿ ನೀಡಲಾಗುತ್ತಿದೆ.

Facebook Comments

Sri Raghav

Admin