ಸಾರಿಗೆ ಸಂಸ್ಥೆ ನೌಕರರ ಪ್ರತಿಭಟನೆ, KSRTC ಮತ್ತು BMTC ಸಂಚಾರ ಯಥಾ ಸ್ಥಿತಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.27-ಸಾರಿಗೆ ಸಂಸ್ಥೆ ನೌಕರರ ಪ್ರತಿಭಟನೆ ನಡುವೆಯೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬೆಂಗಳೂರು ಮಹಾನಗರ ಸಂಸ್ಥೆಯ ಬಸ್ ಸಂಚಾರ ಯಥಾ ರೀತಿ ಮುಂದುವರೆದಿದೆ. ಪ್ರಯಾಣಿಕರಿಗೆ ತೊಂದರೆಯಾಗದ ರೀತಿಯಲ್ಲಿ ಸಾರಿಗೆ ಸಂಸ್ಥೆಗಳು ಬಸ್ ಸಂಚಾರದಲ್ಲಿ ವ್ಯತ್ಯಯ ಕಂಡುಬಂದಿಲ್ಲ. ಇಂದು ಬೆಳಗ್ಗೆಯಿಂದಲೂ ದೈನಂದಿನ ಬಸ್ ಸಂಚಾರ ಎಂದಿನಂತೆ ಇತ್ತು.

ತಾಂತ್ರಿಕ ಕಾರಣಗಳಿಂದಾಗಿ ಕೆಲವೆಡೆ ಬಸ್ ಸಂಚಾರದಲ್ಲಿ ಅಲ್ಪ ಮಟ್ಟದ ವ್ಯತ್ಯಯ ಕಂಡುಬಂದಿತ್ತು. ಉಳಿದಂತೆ ಪ್ರಯಾಣಿಕರಿಗೆ ತೊಂದರೆಯಾಗದಂತೆ ಯಥಾರೀತಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಉಭಯ ಸಂಸ್ಥೆಗಳ ಮೂಲಗಳು ತಿಳಿಸಿವೆ. ಕೆಎಸ್‍ಆರ್‍ಟಿಸಿ ಎಲ್ಲ ವಿಭಾಗ ಮತ್ತು ಡಿಪೋಗಳಲ್ಲೂ ಬಸ್ ಸೇವೆ ಎಂದಿನಂತಿತ್ತು ಎಂದು ಕೆಎಸ್‍ಆರ್‍ಟಿಸಿ ಮೂಲಗಳು ತಿಳಿಸಿವೆ.

ಬೆಂಗಳೂರು ಕೇಂದ್ರ ವಿಭಾಗ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರು, ಮಂಗಳೂರು, ದಾವಣಗೆರೆ, ಶಿವಮೊಗ್ಗ ಸೇರಿದಂತೆ ಬಹುತೇಕ ಕಡೆಗಳಲ್ಲಿ ಬಸ್ ಸಂಚಾರ ಯಥಾ ರೀತಿ ಮುಂದುವರೆದಿತ್ತು ಎಂದು ಕೆಎಸ್‍ಆರ್‍ಟಿಸಿ ಮೂಲಗಳು ಸ್ಪಷ್ಟಪಡಿಸಿವೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಸಂಚಾರವು ಯಥಾರೀತಿ ಇದ್ದು, ಯಾವುದೇ ರೀತಿಯ ವ್ಯತ್ಯಯವಾಗಿಲ್ಲ. ಎಂದಿನಂತೆ ಇಂದು ಕೂಡ ಎಲ್ಲ ಮಾರ್ಗಗಳಲ್ಲಿ ಬಸ್ ಸಂಚಾರ ಇದೆ ಎಂದು ತಿಳಿಸಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin