ಬಿಗ್ ನ್ಯೂಸ್ : ನಾಳೆ KSRTC ಮತ್ತು BMTC ಬಸ್‌ಗಳು ರೋಡಿಗಿಳಿಯೋದು ಡೌಟ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.26- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನೌಕರರ ಸಂಘಟನೆಯೊಂದು ನಾಳೆ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಬಸ್‍ಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ನಾಳೆ ಸಾವಿರಾರು ಮಂದಿ ಸಾರಿಗೆ ನೌಕರರು ಬೆಂಗಳೂರು ಚಲೋದಲ್ಲಿ ಪಾಲ್ಗೊಳ್ಳುವುದರಿಂದ ಬಿಎಂಟಿಸಿ ಹಾಗೂ ಕೆಎಸ್‍ಆರ್‍ಟಿಸಿ ಬಸ್‍ಗಳು ರಸ್ತೆಗಿಳಿಯುವುದೇ ಎಂಬುದರ ಬಗ್ಗೆ ಕುತೂಹಲ ಮೂಡಿಸಿದೆ.

ಆದರೂ ಬೆಳಗ್ಗೆಯಿಂದಲೇ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಸಂಘಟನೆಗಳು ಹೇಳುವತ್ತಿವೆ. ಆದರೆ ಬಂದ್ ನಿಂದ ಯಾವುದೇ ಅನಾನುಕೂಲ ಆಗುವುದಿಲ್ಲ ಎಂದು ಸಾರಿಗೆ ಇಲಾಖೆ ಅಧಿಕರಿಗಳು ತಿಳಿಸಿದ್ದಾರೆ.

ಒಟ್ಟಾರೆ ಇಂದು ಸಂಜೆಯವರೆಗೂ ಸಂಧಾನ ಪ್ರಕ್ರಿಯೆಗಳು ನಡೆಯಲಿದ್ದು, ನಾಳೆ ಬಿಎಂಟಿಸಿ-ಕೆಆಸ್‍ಆರ್‍ಟಿಸಿ ಬಸ್‍ಗಳು ಸಂಚರಿಸಲಿವೆಯೆ ಎಂಬ ಮಾಹಿತಿ ಖಚಿತವಾಗಿಲ್ಲ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin