ಕೆಎಸ್‌ಆರ್‌ಟಿಸಿ ಬಸ್‍ಗಳಲ್ಲಿ ನಿನ್ನೆ ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಪ್ರಯಾಣ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 28- ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ವಾಗುತ್ತಿದ್ದು, ಸಹಜ ಸ್ಥಿತಿಯತ್ತ ಬಸ್ ಸಂಚಾರ ಮರಳುತ್ತಿದೆ. ಕೆಎಸ್‌ಆರ್‌ಟಿಸಿ ಬಸ್‍ಗಳಲ್ಲಿ ನಿನ್ನೆ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡಿದ್ದು, ಇಂದು ಮೂರುವರೆ ಸಾವಿರಕ್ಕೂ ಹೆಚ್ಚು ಬಸ್‍ಗಳನ್ನು ಕಾರ್ಯಾಚರಣೆ ಮಾಡಲು ಉದ್ದೇಶಿಸಲಾಗಿತ್ತು.

ಇಂದು ಬೆಳಗ್ಗೆ ಬೆಂಗಳೂರು, ಮೈಸೂರು, ತುಮಕೂರು, ಕೋಲಾರ ಸೇರಿದಂತೆ ವಿವಿಧ ನಗರಗಳಿಂದ ಸುಮಾರು 250ಕ್ಕೂ ಹೆಚ್ಚು ಬಸ್ ಸಂಚಾರ ಆರಂಭವಾಗಿತ್ತು. ಪ್ರಯಾಣಿಕರ ಸಂಖ್ಯೆಯೂ ನಿರೀಕ್ಷೆಯಂತೆ ಹೆಚ್ಚಾಗಿದೆ ಎಂದು ಕೆಎಸ್‌ಆರ್‌ಟಿಸಿ ಮೂಲಗಳು ತಿಳಿಸಿವೆ.

ಬಿಎಂಟಿಸಿ ಬಸ್ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಎಂದಿನಂತೆ ಬಸ್ ಸಂಚಾರ ಎಲ್ಲಾ ಬಡಾವಣೆಗಳಲ್ಲೂ ಆರಂಭವಾಗಿದೆ. ಪ್ರಯಾಣಿಕರು ನಿರೀಕ್ಷಿತ ಪ್ರಮಾಣದಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ.

ಪ್ರಯಾಣಿಕರ ಅನುಕೂಲಕ್ಕಾಗಿ ಟಿಟಿಎಂಸಿ ಬಸ್ ನಿಲ್ದಾಣ ಒಳಗೊಂಡಂತೆ 65 ಸ್ಥಳಗಳಲ್ಲಿ ಮಾಸಿಕ ಪಾಸ್ ವಿತರಣೆ ಮಾಡಲಾಗುತ್ತದೆ. ಅಲ್ಲದೆ ನಗರದ 200 ಬೆಂಗಳೂರು ಒನ್ ಕೇಂದ್ರಗಳಲ್ಲೂ ಮಾಸಿಕ ಪಾಸ್ ವಿತರಣೆಗೆ ಅವಕಾಶ ಕಲ್ಪಿಸಿದ್ದಲ್ಲದೆ, 11 ಖಾಸಗಿ ಏಜೆನ್ಸಿಗಳ ಮೂಲಕ ವಿತರಣೆ ಮಾಡಲಾಗುತ್ತಿದೆ. ಇಂದಿನಿಂದಲೇ ಮಾಸಿಕ ಪಾಸ್‍ಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Facebook Comments