ಪಿಯು ಪೂರಕ ಪರೀಕ್ಷೆ : ಕೆಎಸ್‌ಆರ್‌ಟಿಸಿಯಿಂದ ಉಚಿತ ಬಸ್ ಸೇವೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.5-ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ತೆರಳಲು ಹಾಗೂ ಹಿಂದಿರುಗಲು ಕೆಎಸ್‍ಆರ್‍ಟಿಸಿ ನಗರ, ಹೊರವಲಯ ಮತ್ತು ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸ ಬಹುದು.

ಈ ಸಂಬಂಧ ಪ್ರಕಟಣೆ ನೀಡಿರುವ ನಿಗಮ, ದ್ವೀತೀಯ ಪಿಯುಸಿ, ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸುವ ಮೂಲಕ ಈ ಸೌಲಭ್ಯ ಪಡೆಯುವಂತೆ ತಿಳಿಸಿದೆ.

Facebook Comments