ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಬಸ್, ರೈತ ಮತ್ತು ಭಿಕ್ಷುಕ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಕೊರಟಗೆರೆ, ಜ.23- ಚಾಲಕನ ಅಜಾಗರೂಕತೆಯಿಂದ ಸಾರಿಗೆ ಬಸ್ ಮರಕ್ಕೆ ಗುದ್ದಿದ ಪರಿಣಾಮ ರೈತ ಹಾಗೂ ಭಿಕ್ಷುಕ ಸಾವನ್ನಪ್ಪಿ 10 ಜನ ಗಾಯಗೊಂಡಿರುವ ಘಟನೆ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಪಂ ವ್ಯಾಪ್ತಿಯ ಕಾಶಾಪುರ ಗ್ರಾಮದ ಮುಖ್ಯರಸ್ತೆಯಲ್ಲಿ ಸಂಭವಿಸಿದೆ.ಭಿಕ್ಷುಕ ಸ್ಥಳದಲ್ಲೇ ಸಾವನ್ನಪ್ಪಿದರೆ ರೈತ ಗೋಪಾಲಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರದಿಂದ ಗೌರಿಬಿದನೂರು-ಮಧುಗಿರಿ-ಶಿರಾ ಮಾರ್ಗವಾಗಿ ತಿರುಪತಿಗೆ ತೆರಳುತ್ತಿದ್ದ ಸರ್ಕಾರಿರಿ ಕೊರಟಗೆರೆ ತಾಲೂಕಿನ ಕಾಶಾಪುರ ತಿರುವಿನಲ್ಲಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಕಾಶಪುರದ ಮುಖ್ಯರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಭಿಕ್ಷುಕನ ಮೇಲೆ ಬಸ್ ಹರಿದು ಆತ ಸ್ಥಳದಲ್ಲಿಯೇ ಮೃತಪಟ್ಟರೆ, ನಂತರ ಅದೇ ವೇಗವಾಗಿ ತೆರಳಿದ ಬಸ್ ರೈತ ಗೋಪಾಲನಾಯ್ಕನ ಮೇಲೆಯೂ ಹರಿದ ಪರಿಣಾಮ ರೈತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬಸ್ ಚಾಲಕ ಅಪಘಾತವಾದ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾನೆ. ನಿರ್ವಾಹಕನ ಕೈಕಾಲು ಮುರಿದಿವೆ. ಬಸ್‍ನಲ್ಲಿದ್ದ 10 ಜನರಿಗೆ ಗಾಯವಾಗಿ ಕೊರಟಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಕೊರಟಗೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin