ನೈಟ್ ಕರ್ಫ್ಯೂ ಇದ್ರೂ ಸಂಚರಿಸಲಿವೆ ಕೆಎಸ್‌ಆರ್‌ಟಿಸಿ ಬಸ್ಸುಗಳು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.23- ಹೊಸ ಮಾದರಿಯ ರೂಪಾಂತರಗೊಂಡ ಕೊರೊನಾ ವೈರಸ್ ಯಾವುದೇ ಸಂದರ್ಭದಲ್ಲಿ ಅಪ್ಪಳಿಸಬಹುದೆಂಬ ಭೀತಿಯ ಕಾರಣಕ್ಕಾಗಿ ರಾಜ್ಯ ಸರ್ಕಾರ ಇಂದು ರಾತ್ರಿಯಿಂದಲೇ ಜಾರಿಯಾಗುವಂತೆ ರಾಜ್ಯಾದ್ಯಂತ 9 ದಿನಗಳ ಕಾಲ ರಾತ್ರಿ ಕಫ್ರ್ಯೂ(ನೈಟ್‍ಕಫ್ರ್ಯೂ) ವಿಧಿಸುವ ತೀರ್ಮಾನವನ್ನು ಕೈಗೊಂಡಿದೆ.

ಆದರೆ ಕೆಎಸ್‌ಆರ್‌ಟಿಸಿ ಬಸ್ ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ರಾತ್ರಿ 10 ಗಂಟೆ ನಂತರವೂ ಕೆಎಸ್‌ಆರ್‌ಟಿಸಿ ಬಸ್ ಗಳು ಎಂದಿನಂತೆ ಸಂಚರಿಸಲಿವೆ.

ಇಂದು ರಾತ್ರಿ 10ರಿಂದ ಮುಂಜಾನೆ 6 ಗಂಟೆಯವರೆಗೂ ಜ.2ರವರೆಗೆ ಅಗತ್ಯ ತುರ್ತು ಸೇವೆಗಳನ್ನು ಹೊರತುಪಡಿಸಿ ಎಲ್ಲ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಬೀಳಲಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಿ.ಕೆ.ಸುಧಾಕರ್, ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಲಾಯಿತು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‍ವೈ, ಇಂದು ರಾತ್ರಿಯಿಂದಲೇ ಜಾರಿಯಾಗುವಂತೆ ಪ್ರತಿದಿನ ರಾತ್ರಿ 10ರಿಂದ ಮುಂಜಾನೆ 6ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಫ್ರ್ಯೂ ವಿಧಿಸಲಾಗುವುದು. ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.

ತಾಂತರಿಕ ಸಲಹಾ ಸಮಿತಿ ಸದಸ್ಯರು ನೀಡಿರುವ ಸಲಹೆಯಂತೆ ರೂಪಾಂತರ ಕೋವಿಡ್ ಸೋಂಕು ಹಬ್ಬಬಹುದೆಂಬ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ರಾತ್ರಿ 10ರಿಂದ ಮುಂಜಾನೆ 6ರವರೆಗೆ ಕಫ್ರ್ಯೂ ಜಾರಿಯಲ್ಲಿರುತ್ತದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕ್ರಮ ತೆಗೆದುಕೊಂಡಿದ್ದೇವೆ. ಇದಕ್ಕೆ ಎಂದಿನಂತೆ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.

Facebook Comments

Sri Raghav

Admin