ಮೊಬೈಲ್ ಸ್ಯಾನಿಟೈಸರ್ ಬಸ್ ‘ಸಾರಿಗೆ ಸಂಜೀವಿನಿ’ಗೆ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.11- ಮೊಬೈಲ್ ಸ್ಯಾನಿಟೈಸರ್ ಬಸ್ ಸಾರಿಗೆ ಸಂಜೀವಿನಿಗೆ ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ್ ಅವರು ಚಾಲನೆ ನೀಡಿದರು. ಕೆಎಸ್‍ಆರ್‍ಟಿಸಿಯ ಬೆಂಗಳೂರು ಕೇಂದ್ರೀಯ ವಿಭಾಗದ ಬಸ್ ಘಟಕ -2ರಲ್ಲಿ ತಾವೇ ಸ್ಯಾನಿಟೈಸರ್ ಸ್ಪ್ರೇಗೆ ಒಳಗಾಗುವ ಮೂಲಕ ಶಿವಯೋಗಿ ಕಳಸದ್ ಚಾಲನೆ ನೀಡಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ಇಂದಿನಿಂದ ಬೆಂಗಳೂರಿನಲ್ಲಿ ಸ್ಯಾನಿಟೈಸರ್ ಬಸ್ ಸಂಚರಿಸಲಿದೆ. ಹತ್ತು ವರ್ಷದ ಹಳೆಯ ಬಸ್‍ಅನ್ನು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತಿಸಿದ ಕೆಎಸ್‍ಆರ್‍ಟಿಸಿ , ಸುಮಾರು 20 ಸಾವಿರ ವೆಚ್ಚದಲ್ಲಿ ಅನುಪಯುಕ್ತ ಬಸ್‍ಅನ್ನು ಪುನರ್ ನಿರ್ಮಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಮುಂದಿನ ದಿನಗಳಲ್ಲಿ ಇತರೆ ಜಿಲ್ಲೆಗಳ ಡಿಪೋಗಳಲ್ಲಿ ಸ್ಕ್ರ್ಯಾಪ್ ಬಸ್‍ಗಳನ್ನು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತಿಸಲಾಗುವುದು. ಬಸ್ ಮುಂಭಾಗ ಹತ್ತಿ ಹಿಂಭಾಗ ಇಳಿದರೆ ಸಂಪೂರ್ಣವಾಗಿ ದೇಹಕ್ಕೆ ವೈರಾಣು ನಿರೋಧಕ ದ್ರಾವಣ ಸಿಂಪಡಣೆ ಆಗಲಿದೆ. ಈ ಮೂಲಕ ಕೊರೊನಾ ಸೋಂಕು ನಿವಾರಣೆಗೆ ಮುಂಜಾಗ್ರತಾ ಕ್ರಮದ ಮತ್ತೊಂದು ಉಪಕ್ರಮ ಇದಾಗಿದೆ.

ಬಸ್ ನಿಲ್ದಾಣ ಮತ್ತು ಘಟಕಗಳಲ್ಲಿ ಪ್ರಯಾಣಿಕರು ಹಾಗೂ ಸಿಬ್ಬಂದಿಗಳು (ಬಸ್ ಸಂಚಾರ ಇಲ್ಲದಿರುವುದರಿಂದ) ಓಡಾಟ ಇಲ್ಲದಿರುವುದರಿಂದ, ಬೆಂಗಳೂರು ನಗರದಲ್ಲಿ ಅವಶ್ಯಕ ಸೇವೆ ಸಲ್ಲಿಸುತ್ತಿರುವ ಪೊಲೀಸ್ , ಮೆಡಿಕಲ್, ಪೌರ ಸಿಬ್ಬಂದಿಗಳ ಅನುಕೂಲಕ್ಕಾಗಿ ಈ ಬಸ್ ಸಂಚರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಸಂದರ್ಭದಲ್ಲಿ ನಿರ್ದೇಶಕರಾದ (ಭದ್ರತಾ ಜಾಗೃತ) ಡಾ. ರಾಮ್ ನಿವಾಸ್ ಸಪಟ್, (ಸಿಬ್ಬಂದಿ ಪರಿಸರ) ಕವಿತಾ ಎಸ್.ಮನ್ನಿಕೇರಿ, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Facebook Comments

Sri Raghav

Admin