ಸೊರಬದಲ್ಲಿ KSRTC ಘಟಕ ನಿರ್ಮಾಣ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.15- ಸೊರಬ ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ ಘಟಕ ಮತ್ತು ನೌಕರರ ವಸತಿ ಗೃಹ ನಿರ್ಮಿಸಲು 9 ಎಕರೆ ನಿವೇಶನವಿದ್ದು, ಆದಷ್ಟು ಶೀಘ್ರವಾಗಿ ಬಸ್ ಘಟಕ ನಿರ್ಮಾಣಕ್ಕೆ ಕಾಯಕಲ್ಪ ನೀಡಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೋವಿಡ್‍ನಿಂದ ಕೆಎಸ್‍ಆರ್‍ಟಿಸಿಯ ಆರ್ಥಿಕ ಪರಿಸ್ಥಿತಿ ಉತ್ತಮವಿಲ್ಲ. ಆರ್ಥಿಕ ಪರಿಸ್ಥಿತಿ ಸುಧಾರಿಸಿದ ನಂತರ ಬಸ್ ಘಟಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಬೈಲಹೊಂಗಲ ದಲ್ಲಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಶೇ.50ರಷ್ಟು. ಪೂರ್ಣಗೊಂಡಿದೆ. ನೂತನ ಬಸ್ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಎರಡು ಕೋಟಿ ಅನುದಾನ ಒದಗಿಸಿ ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

Facebook Comments