ಮಾಜಿ ಸಿಎಂ ಕುಮಾರಸ್ವಾಮಿಗೆ ಸಮನ್ಸ್ ಜಾರಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.5- ಸೂಕ್ತ ಸಾಕ್ಷ್ಯಾಧಾರಗಳಿಲ್ಲವೆಂದು ಲೋಕಾಯುಕ್ತ ಪೊಲೀಸರು ಬಿ ರಿಫೋರ್ಟ್ ಸಲ್ಲಿಕೆಯಾಗಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮೇಲಿನ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಹಲಗೆ ವಡೇರಹಳ್ಳಿಯ 3.34 ಎಕರೆ ಭೂಮಿಯನ್ನು 2007ರಲ್ಲಿ ಅಕ್ರಮವಾಗಿ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಚಾಮರಾಜನಗರ ಮಹದೇವಸ್ವಾಮಿ ಎಂಬುವವರು ಸಲ್ಲಿಸಿದ್ದ ದೂರಿನ ಸಂಬಂಧ ಸೂಕ್ತ ಸಾಕ್ಷ್ಯಾಧಾರಗಳಿಲ್ಲವೆಂದು ಲೋಕಾಯುಕ್ತ ಪೊಲೀಸರು ಬಿ ರಿಫೋರ್ಟ್ ಸಲ್ಲಿಸಿದ್ದರು.

ಇದರ ವಿರುದ್ಧ ಮಹದೇವಸ್ವಾಮಿ ಮೇಲ್ಮನವಿ ಸಲ್ಲಿಸಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ರಾಮಚಂದ್ರ ಉದ್ಧಾರ್ ಅವರು ಅ.4ರಂದು ಖುದ್ದು ಹಾಜರಾಗುವಂತೆ ಕುಮಾರಸ್ವಾಮಿ ಅವರಿಗೆ ಸಮನ್ಸ್ ನೀಡಿದ್ದಾರೆ. ಈಗಾಗಲೇ ಈ ಪ್ರಕರಣ ಮುಗಿದುಹೋಯಿತು ಎಂದುಕೊಂಡಿರುವಾಗ ಮತ್ತೆ ಸಮನ್ಸ್ ನೀಡಿರುವುದರಿಂದ ಕುಮಾರಸ್ವಾಮಿ ಅವರಿಗೆ ಕಾನೂನಿನ ಕಂಟಕ ಎದುರಾದಂತಾಗಿದೆ.

Facebook Comments