“ನೆರೆ ಸಂತ್ರಸ್ತರಿಗಿಂತ ಅನರ್ಹರನ್ನು ಬಚಾವ್ ಮಾಡೋದೇ ಸಿಎಂಗೆ ಮುಖ್ಯವಾಗಿದೆ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.22-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೆರೆ ಸಂತ್ರಸ್ತರಿಗಾಗಿ ಕೇಂದ್ರ ಸರ್ಕಾರದ ಪರಿಹಾರ ಕೇಳಲು ಸಮಯಾವಕಾಶ ಸಿಗಲಿಲ್ಲ. ಆದರೆ ಅನರ್ಹ ಶಾಸಕರನ್ನು ಬಚಾವ್ ಮಾಡಲು ಸಾಕಷ್ಟು ಸಮಯವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಮ್ಮ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ನೆರೆ ಪರಿಹಾರ ಕೇಳಲು ಮುಖ್ಯಮಂತ್ರಿಯವರಿಗೆ ದೆಹಲಿಗೆ ಹೋಗಿ ಬರಲು ಸಮಯಾವಕಾಶವೇ ಸಿಗಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಆದರೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಪ್ರಭಾವ ಬಳಸಿ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಸಂತ್ರಸ್ತ ಅನರ್ಹರನ್ನು ಬಚಾವ್ ಮಾಡಲು ದೆಹಲಿಗೆ ತೆರಳಲು ಯಡಿಯೂರಪ್ಪ ಅವರಿಗೆ ಸಾಕಷ್ಟು ಸಮಯವಿದೆ ಎಂದು ಆರೋಪಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ