ಕಾಂಗ್ರೆಸ್‍ ಒಳಸಂಚಿನಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ : ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.18- ಕಾಂಗ್ರೆಸ್‍ನವರ ಒಳಸಂಚಿನಿಂದ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಶಿವಾಜಿನಗರದಲ್ಲಿ ಜೆಡಿಎಸ್ ಅಭ್ಯರ್ಥಿ ತನ್ವೀರ್ ಅಹಮ್ಮದ್ ಉಲ್ಲಾ ಪರವಾಗಿ ರೋಡ್‍ಶೋ ನಡೆಸಿದ ಅವರು, ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.

ಜೆಡಿಎಸ್ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಜೆಡಿಎಸ್‍ನ್ನು ಬಿಜೆಪಿಯ ಬಿ ಟೀಮ್ ಎಂದು ಹೇಳುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂದು ಟೀಕಿಸಿದರು.  ಬಡವರು ಕಳೆದುಕೊಂಡಿರುವ ಹಣವನ್ನು ಹಿಂದಿರುಗಿಸಲು ನಾನು ಕ್ರಮ ಕೈಗೊಂಡಿದ್ದೆ.

ಬಡವರಿಗೆ ಅವರ ಹಣ ಅವರಿಗೆ ತಲುಪವವರೆಗೂ ಜನರೊಂದಿಗೆ ಇರುತ್ತೇನೆ ಎಂದು ಪರೋಕ್ಷವಾಗಿ ಅಧಿಕ ಬಡ್ಡಿ ಆಸೆ ತೋರಿಸಿ ಜನರಿಗೆ ವಂಚಿಸುತ್ತಿರುವ ಸಂಸ್ಥೆಗಳನ್ನು ಉದ್ದೇಶಿಸಿ ಹೇಳಿದರು.  ನಿಮ್ಮನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದ್ದು ನಮಗೆ ಶಕ್ತಿ ನೀಡಿ ಎಂದು ಪ್ರಚಾರದ ವೇಳೆ ಜನತೆಯಲ್ಲಿ ಮನವಿ ಮಾಡಿದರು.

Facebook Comments