ಕೊರೋನಾದಿಂದ ಮೃತಪಡುವ ಪೌರಕಾರ್ಮಿಕರಿಗೆ 50 ಲಕ್ಷ ಪರಿಹಾರ ಘೋಷಿಸಿ : ಎಚ್‌ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.23- ಕರ್ತವ್ಯ ನಿರತ ಪೌರಕಾರ್ಮಿಕರು ಸೋಂಕಿನಿಂದ ಮೃತರಾದರೆ ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರವನ್ನು ಸರ್ಕಾರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವ ಪೌರಕಾರ್ಮಿಕ ದಿನಾಚರಣೆಯ ಶುಭಾಯಗಳನ್ನು ಕೋರುತ್ತಾ, ಹಣದ ರೂಪದ ಪರಿಹಾರ ನೀಡುವುದು ಸರ್ಕಾರದ ಆಡಳಿತಾತ್ಮಕ ಕರ್ತವ್ಯವಾಗುತ್ತದೆ. ಪೌರಕಾರ್ಮಿಕ ಸಮುದಾಯವನ್ನು ಸದಾ ಕೃತಜ್ಞತೆಯಿಂದ ಸ್ಮರಿಸುವುದು, ಅವರ ಬೇಡಿಕೆಗಳನ್ನು ಈಡೇರಿಸುವುದೇ ಅವರಿಗೆ ಸಲ್ಲಿಸಬಹುದಾದ ಗೌರವಾಗುತ್ತದೆ ಎಂದು ಹೇಳಿದ್ದಾರೆ.

ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ತ್ಯಾಗ, ಸೇವೆ, ಸಮರ್ಪಣೆ, ಕಾರುಣ್ಯದಿಂದ ಸದಾ ಜೀವ ತೇಯುತ್ತಿರುವ ಪೌರಕಾರ್ಮಿಕರನ್ನು ಈ ಸಮಾಜ ಪ್ರತಿ ಕ್ಷಣವೂ ತಾಯತನದಿಂದ ಕಾಣುವುದೇ ನಾವು ಸಲ್ಲಿಸಬಹುದಾದ ದೊಡ್ಡ ಕೃತಜ್ಞತೆ ಎಂದಿದ್ದಾರೆ. ಕೊರೊನಾ ಸಂದರ್ಭದಲ್ಲೂ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ದುಡಿಯುತ್ತಿರುವ ಪೌರಕಾರ್ಮಿಕರು ವೈದ್ಯ ಸಮುಹದಂತೆ ಪ್ರಧಾನ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.

Facebook Comments