ಇಂದು 2.12ಕ್ಕೆ ಮೈತ್ರಿ ಸರ್ಕಾರದ ನೂತನ ಸಚಿವರ ಪ್ರಮಾಣವಚನ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-Devegowda--01

ಬೆಂಗಳೂರು, ಜೂ.6- ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದ ನೂತನ ಸಚಿವರು ಇಂದು ಮಧ್ಯಾಹ್ನ 2.12 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಆ ಮೂಲಕ ರಾಜ್ಯದಲ್ಲಿ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬರಲಿದೆ. ಜೆಡಿಎಸ್ ನಿಂದ 10 ಜನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನು ಕಾಂಗ್ರೆಸ್ ನಿಂದ 12 ಕ್ಕೂ ಹೆಚ್ಚು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಜೆಡಿಎಸ್ ಪಕ್ಷದಿಂದ ಯಾರು ಸಚಿವರಾಗಬೇಕೆಂಬುದು ಬಹುತೇಕ ಆಖೈರುಗೊಂಡಿದೆ. ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ನಿವಾಸದಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಇತ್ತ ಕಾಂಗ್ರೆಸ್ ಸಚಿವರ ಪಟ್ಟಿ ಫೈನಲ್ ಆಗಿದ್ದು ಅಧಿಕೃತವಾಗಿ ಹೊರಬರಬೇಕಿದೆ.

Facebook Comments

Sri Raghav

Admin