ಬಜೆಟ್ ಮಂಡಿಸದಿದ್ದರೆ ಶಾಸಕರ ಹಕ್ಕುಚ್ಯುತಿಯಾಗುತ್ತೆ : ಸಿಎಂ ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01

ಬೆಂಗಳೂರು, ಜೂ.25- ಬಜೆಟ್ ಮಂಡನೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ಈಗಲೂ ಹೊಸ ಬಜೆಟ್ ಮಂಡಿಸಬೇಕೋ, ಬೇಡವೋ ಎಂಬ ಚರ್ಚೆಗಳು ನಡೆಯುತ್ತಿವೆ. ಒಂದು ವೇಳೆ ಬಜೆಟ್ ಮಂಡಿಸದೇ ಹೋದರೆ ಹೊಸದಾಗಿ ಶಾಸಕರಾಗಿರುವವರ ಹಕ್ಕುಚ್ಯುತಿಯಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 5ರಂದು ನಾನು ಸಮ್ಮಿಶ್ರ ಸರ್ಕಾರದ ಹೊಸ ಬಜೆಟ್ ಮಂಡಿಸಬೇಕೆಂದು ತೀರ್ಮಾನ ಕೈಗೊಂಡಿದ್ದೇನೆ. ಈಗಿನ ಪರಿಸ್ಥಿತಿ ನೋಡಿದರೆ ಬಜೆಟ್ ಮಂಡಿಸುತ್ತೇನೋ ಇಲ್ಲವೋ ಎಂಬ ಗೊಂದಲದಲ್ಲಿದ್ದೇನೆ ಎಂದು ಹೇಳಿದರು.

ಕಳೆದ ಬಾರಿ ಇದ್ದವರ ಪೈಕಿ 100 ಶಾಸಕರು ಚುನಾವಣೆಯಲ್ಲಿ ಸೋತಿದ್ದಾರೆ. ಕಳೆದ ಸರ್ಕಾರದ ಬಜೆಟ್‍ನ್ನು ಅಂಗೀಕರಿಸಿ ಲೇಖಾನುದಾನ ಪಡೆಯುವುದಾದರೆ ಈಗಿನ 100 ಶಾಸಕರಿಗೆ ತೊಂದರೆಯಾಗುತ್ತದೆ. ಅವರೇನಾದರೂ ಹಕ್ಕುಚ್ಯುತಿ ಮಂಡಿಸಿದರೆ ನಾವು ಏನು ಮಾಡುವುದು. ಅದಕ್ಕಾಗಿಯೇ ಹೊಸ ಬಜೆಟ್‍ಗೆ ಮುಂದಾಗಿರುವುದಾಗಿ ಕುಮಾರಸ್ವಾಮಿ ಹೇಳಿದರು.

ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯ ಬಗ್ಗೆ ಮುಂದಿನ ಹೋರಾಟ ನಿರ್ಧರಿಸಲು ಇಂದು ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಹಾಗೂ ರಾಜ್ಯದ ಅಡ್ವೋಕೇಟ್ ಜನರಲ್ ಅವರ ಮಹತ್ವದ ಸಭೆ ಕರೆಯಲಾಗಿದೆ. ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಿದೆ. ಅದಕ್ಕೆ ರಾಜ್ಯ ಸರ್ಕಾರದಿಂದ ಒಬ್ಬ ಪ್ರತಿನಿಧಿಯನ್ನು ಕಳುಹಿಸಬೇಕಾಗಿದೆ. ನಮ್ಮ ಆಕ್ಷೇಪಣೆಗಳನ್ನು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ , ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್‍ಗಡ್ಕರಿ ಅವರನ್ನು ಭೇಟಿ ಮಾಡಿ ತಿಳಿಸಿದ್ದೇವೆ. ಇಂದು ನಡೆಯುವ ಸಭೆಯಲ್ಲಿ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಬೇಕು, ಯಾವ ರೀತಿ ಹೋರಾಟ ಮಾಡಬೇಕು ಎಂಬುದರ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು.

ಹಜ್‍ಗರ್‍ಗೆ ಅಬ್ದುಲ್‍ಕಲಾಂ ಅವರ ಹೆಸರಿಡಬೇಕು ಎಂದು ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ಅವರು ನೀಡಿದ ಸಲಹೆಗೆ ಪ್ರತಿಕ್ರಿಯಿಸಿದ ಸಿಎಂ, ನಾವು ಯಾವ ಹೆಸರನ್ನಿಡಬೇಕೆಂಬುದನ್ನು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

Facebook Comments

Sri Raghav

Admin