ಎಲೆಕ್ಷನ್ ರಿಸಲ್ಟ್ ಬಳಿಕ ಮೊದಲ ಬಾರಿಗೆ ಸಿದ್ದರಾಮಯ್ಯ-ಹೆಚ್ಡಿಕೆ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 24- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಸಂಜೆ ಮೈತ್ರಿಕೂಟದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚಿಸಿದರು.

ಲೋಕಸಭಾ ಚುನಾವಣೆ ಫಲಿತಾಂಶ, ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳನ್ನು ತಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ಇನ್ನೂ ಉತ್ತಮ ಸಮನ್ವಯ ಸಾಧಿಸುವ ಮೂಲಕ ಸರ್ಕಾರ ಮುನ್ನಡೆಸಲು ಉಭಯ ಮುಖಂಡರು ತೀರ್ಮಾನಿಸಿದರು.

ನಾಳೆ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಲಿದ್ದಾರೆ ಅದಕ್ಕೂ ಮುನ್ನಾ ಕುಮಾರಸ್ವಾಮಿ ಅವರೊಂದಿಗೆ ಮಹತ್ವದ ಸಭೆಯನ್ನು ನಡೆಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬಳಿಕ ಈ ಇಬ್ಬರೂ ನಾಯಕರು ಮೊದಲ ಬಾರಿಗೆ ಭೇಟಿ ಆಗಿದ್ದಾರೆ. ರಾಜ್ಯ ರಾಜಕಾರಣದ ಬಗ್ಗೆ ಅತ್ಯಂತ ಮಹತ್ವದ ಚರ್ಚೆ ನಡೆಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin