‘7 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಪ್ರಧಾನಿ ಕನಸು ಕಾಣಲು ದೇವೇಗೌಡರು ಏನು ಬಿಎಸ್‍ವೈ ಅಲ್ಲ’

ಈ ಸುದ್ದಿಯನ್ನು ಶೇರ್ ಮಾಡಿ

ವಿಜಯಪುರ,ಏ.20- ಏಳು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಪ್ರಧಾನಿಯಾಗುವ ಕನಸು ಕಾಣಲು ದೇವೇಗೌಡರೇನು ಯಡಿಯೂರಪ್ಪ ಅಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಮತ್ತೆ ಪ್ರಧಾನಿ ಆಗುವುದಾಗಿ ಎಲ್ಲೂ ಹೇಳಿಲ್ಲ. ಏಳು ಸ್ಥಾನಗಳಲ್ಲಿ ಸ್ಪರ್ಧಿಸಿ ಪ್ರಧಾನಿ ಕನಸು ಕಾಣಲು ಅವರೇನು ಯಡಿಯೂರಪ್ಪ ಅಲ್ಲ.

ಯುಪಿಎ, ಎನ್‍ಡಿಎ ಹೊರತಾಗಿ ಸರ್ಕಾರ ರಚನೆಯಾಗಲಿದೆ ಮಮತಾ ಬ್ಯಾನರ್ಜಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಫಲಿತಾಂಶ ಬರಲಿ, ನೋಡೋಣ. ಕೂಸು ಹುಟ್ಟುವ ಮುಂಚೆ ಕುಲಾವಿ ಏಕೆ ಎಂದರು.

ವಿಜಯಪುರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಸುನೀತಾ ಚೌಹಾಣ್ ಗೆಲವು ಸಾಧಿಸುತ್ತಾರೆ. ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದೇನೆ. ನಿನ್ನೆ ವಿಜಯಪುರ ಜಿಲ್ಲೆಯಲ್ಲಿ ಪ್ರಚಾರ ಮಾಡಿದ್ದೇವೆ, ನಮ್ಮ ಅಭ್ಯರ್ಥಿ ಪರವಾಗಿ ಜನರ ಒಲವಿದೆ ಎಂದು ಹೇಳಿದರು.

ನಮ್ಮ ಪಕ್ಷ 7 ಮತಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಜೆಡಿಎಸ್ ಮೈತ್ರಿಯಿಂದ 22 ರಿಂದ 25 ಕ್ಷೇತ್ರಗಳಲ್ಲಿ ಗೆಲವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ