“ದೇವೇಗೌಡರು ಮತ್ತು ಕುಮಾರಸ್ವಾಮಿಯವರ ದೇಹ ಬಂಗಾರ, ಆದ್ರೆ ಹಿತ್ತಾಳೆ ಕಿವಿ”

ಈ ಸುದ್ದಿಯನ್ನು ಶೇರ್ ಮಾಡಿ

ನಾಗಮಂಗಲ,ಸೆ.21- ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ದೇಹ ಬಂಗಾರ. ಆದರೆ ಕಿವಿ ಮಾತ್ರ ಹಿತ್ತಾಳೆ ಎಂದು ಹೇಳುವ ಮೂಲಕ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಜೆಡಿಎಸ್ ವರಿಷ್ಠರ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇವೇಗೌಡರು ಮತ್ತು ಕುಮಾರಸ್ವಾಮಿಯವರು ಹೇಳಿಕೆ ಮಾತುಗಳನ್ನು ಕೇಳುತ್ತಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇಡೀ ಒಕ್ಕಲಿಗೆರ ನಾಯಕರನ್ನು ತಯಾರು ಮಾಡಿರುವವರೇ ದೇವೇಗೌಡರು. ಆದರೆ ಚಾಡಿಕೋರರ ಮಾತುಗಳ ಸತ್ಯಾಸತ್ಯತೆಗಳನ್ನು ಪರಿಶೀಲಿಸುವುದಿಲ್ಲ. ಇದು ಪಕ್ಷದ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ನಾನು ಎಲ್ಲಾ ಪಕ್ಷಗಳಿಗೆ ಹೋಗಿ ಬಂದಿದ್ದೇನೆ. ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ತಾಲೂಕಿನ ಶಾಸಕ ಸುರೇಶ್‍ಗೌಡರು ನಾನು ಬಿಜೆಪಿಗೆ ಹೋಗಬೇಕು ಅನ್ನಿಸಿತ್ತು ಎಂದು ಎಲ್ಲೋ ಒಂದು ಕಡೆ ಹೇಳಿಕೆ ಕೊಟ್ಟಿದ್ದಾರೆ. ಬೇಕಾದರೆ ಅವರು ಹೋಗಬಹುದೆನೋ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕಳೆದ ಸಂಸತ್ ಚುನಾವಣೆಯಲ್ಲಿ ನಿಖಿಲ್ ಸೋಲಿಗೆ ಜೆಡಿಎಸ್‍ನ ಯಾವುದೇ ಮುಖಂಡರು ಕಾರಣರಲ್ಲ. ಸುಮಲತಾ ಅವರ ಗೆಲುವಿನ ಹಿಂದೆ ಮತದಾರರ ತೀರ್ಮಾನವಿತ್ತು ಎಂದರು.

ಶಾಸಕರು ಕ್ಷೇತ್ರದ ಕೆಲಸದ ಕಡೆ ಗಮನ ಹರಿಸಲಿ: ಕ್ಷೇತ್ರದ ಶಾಸಕ ಜನಸಾಮಾನ್ಯರ ಕೆಲಸ ಮಾಡಿಕೊಡುವಲ್ಲಿ ತೊಡಗಿಸಿಕೊಳ್ಳಬೇಕು. 47 ಸಾವಿರ ಅಂತರದ ಶಾಸಕರ ಗೆಲುವಿನಲ್ಲಿ ನಮ್ಮ ಕೊಡುಗೆಯೂ ಇದೆ. ದೇವೇಗೌಡರು ನಮ್ಮನ್ನೆಲ್ಲ ಒಂದುಗೂಡಿಸದಿದ್ದರೆ ಸುರೇಶ್‍ಗೌಡರ ಗೆಲುವು ಸಾಧಿಸಲು ಸಾಧ್ಯವಾಗುತ್ತಿರುಲಿಲ್ಲ ಎಂದರು.  ತಾಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ಕೆ.ರಾಮೇಗೌಡ, ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ.ಕೃಷ್ಣಪ್ಪ ಇದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin