ಬೆಂಗಳೂರಿನಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.26- ಕೇಂದ್ರದ ಕಾರ್ಮಿಕ ವಿರೋ ಧೋರಣೆಗಳನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದವು. ನಗರದ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‍ವರೆಗೆ ಮಳೆಯಲ್ಲೇ ಮೆರವಣಿಗೆ ನಡೆಸಿದ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಐಎನ್‍ಟಿಯುಸಿ, ಎಐಟಿಯುಸಿ, ಎಚ್‍ಎಂಎಸ್, ಸಿಐಟಿಯುಸಿ, ಜೆಸಿಟಿಯು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡು ರೈತ ವಿರೋ, ಕಾರ್ಮಿಕ ವಿರೋ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದವು.

ಕೊರೊನಾ ಸಾಂಕ್ರಾಮಿಕ ರೋಗದಿಂದ ದೇಶದಲ್ಲಿ ಅನಿರೀಕ್ಷಿತವಾಗಿ ಲಾಕ್‍ಡೌನ್ ಮಾಡಲಾಯಿತು. ಮೊದಲೇ ಸಂಕಷ್ಟದಲ್ಲಿರುವ ಕಾರ್ಮಿಕರ ಹಿತ ಕಾಪಾಡುವ ಬದಲಿಗೆ ಮತ್ತಷ್ಟು ಸಂಕಷ್ಟ ಮಾತ್ರವಲ್ಲ, ದೇಶದ ಆರ್ಥಿಕ ಸಾರ್ವಭೌಮತೆಗೆ ಧಕ್ಕೆ ತರುವ ಮತ್ತು ಅನ್ನದಾತ ರೈತ ಶ್ರಮಿಕರನ್ನು ಸಂಕಷ್ಟಕ್ಕೆ ತಳ್ಳುವ ಹಲವು ಕಾಯ್ದೆಗಳನ್ನು ಜಾರಿಗೆ ತರಲಾಯಿತು ಎಂದು ಆರೋಪಿಸಿದ ಪ್ರತಿಭಟನಾಕಾರರು ರೈತ ವಿರೋ, ಕಾರ್ಮಿಕ ವಿರೋ ಕಾನೂನುಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.

ಕೊರೊನಾ ಸಂಕಷ್ಟದಿಂದ ಉದ್ಯೋಗಗಳನ್ನು ಕಳೆದುಕೊಂಡು ಸುಮಾರು 15 ಕೋಟಿ ಜನರ ಬದುಕು ಬೀದಿಗೆ ಬಿದ್ದಿದೆ. ಇಂತಹ ಆದಾಯ ತೆರಿಗೆ ರಹಿತ ಕುಟುಂಬಗಳಿಗೆ 7500ರೂ. ಪಾವತಿಸಬೇಕು. ಅಗತ್ಯವಿರುವವರಿಗೆ ತಿಂಗಳಿಗೆ 10 ಕೆಜಿ ಉಚಿತ ಪಡಿತರ ನೀಡಬೇಕು. ನರೇಗಾ ಕೆಲಸವನ್ನು 200 ದಿನಗಳಿಗೆ ಹೆಚ್ಚಿಸಿ ನಗರ ಪ್ರದೇಶಗಳಿಗೆ ವಿಸ್ತರಿಸಿ ಕೂಲಿಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಹಣಕಾಸು ವಲಯ ಸೇರಿದಂತೆ ಸಾರ್ವಜನಿಕ ವಲಯ, ರೈಲ್ವೆ ರಕ್ಷಣಾ ವಲಯದ ಆರ್ಡಿನೆನ್ಸ್, ಕಾರ್ಖಾನೆಗಳು, ಬಂದರು ಮುಂತಾದ ಸರ್ಕಾರಿ ಉತ್ಪಾದನಾ ಸೇವಾ ಸಂಸ್ಥೆಗಳ ಖಾಸಗೀಕರಣ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

40 ಕೋಟಿ ಪಾಲಿಸಿದಾರರನ್ನು ಹೊಂದಿರುವ 32 ಲಕ್ಷ ಕೋಟಿ ಆಸ್ತಿ ಹೊಂದಿರುವ ಎಲ್‍ಐಸಿಯನ್ನು ಖಾಸಗೀಕರಣ ಮಾಡಲು ಹೊರಟಿರುವ ಕ್ರಮವನ್ನು ಖಂಡಿಸಿದ ಅವರು, ಎಲ್ಲ ಖಾಸಗೀಕರಣವನ್ನು ನಿಲ್ಲಿಸಬೇಕು. ಎನ್‍ಪಿಸಿ ರದ್ದುಮಾಡಿ ಹಿಂದಿನ ಪಿಂಚಣಿ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

Facebook Comments