ಇದ್ದಕ್ಕಿದ್ದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಎಂ ಭೇಟಿ ಮಾಡಿದ್ದೇಕೆ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.13- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಯಾವುದೇ ರಾಜಕೀಯ ವಿಷಯ ಚರ್ಚಿಸಿಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಮುಖ್ಯಮಂತ್ರಿಗಳ ನಿವಾಸದಲ್ಲಿಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೂರು ದಿನಗಳ ಹಿಂದೆಯೇ ಸಿಎಂ ಬೇಟೆಗೆ ಅನುಮತಿ ಪಡೆದಿದ್ದೆ. ಅವರು ಬರುವಂತೆ ಸೂಚಿಸಿದ್ದರು. ಹಾಗಾಗಿ ಭೇಟಿಯಾಗಿದ್ದೇನೆ ಎಂದು ಹೇಳಿದರು.

ಬಿಜೆಪಿಯ ಅಶೋಕ್ ಪುಜಾರಿ ಅವರಿಗೆ ಕಾಂಗ್ರೆಸ್‍ನಿಂದ ಟಿಕೆಟ್ ನೀಡಿದರೆ ಗೆಲುವು ಸಾಧಿಸುವರೆಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳುವ ಮೂಲಕ ಕುತೂಹಲ ಕೆರಳಿಸಿದ್ದರು. ಅಲ್ಲದ ಜಾರಕಿಹೊಳಿ ಕುಟುಂಬದಲ್ಲಿ ಈ ವಿಷಯ ಬಿರುಗಾಳಿಯನ್ನೇ ಎಬ್ಬಿಸಿತು.

ಇದರ ಬೆನ್ನಲ್ಲೇ ಯಡಿಯೂರಪ್ಪ ಅವರನ್ನು ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ. ಆದರೆ ಲಕ್ಷ್ಮಿ ಅವರು ಸಿಎಂ ಭೇಟಿಯಾಗಿರುವುದು ಕೇವಲ ತಮ್ಮ ಕ್ಷೇತ್ರದ ಅಭಿವೃದ್ದಿ ಕುರಿತು ಚರ್ಚಿಸಲು ಮಾತ್ರ. ರಾಜಕೀಯ ವಿಷಯವನ್ನು ಚರ್ಚಿಸಿಲ್ಲ ಎಂದಿದ್ದಾರೆ.

ಜೊತೆಗೆ ಇಂದೇ ಅನರ್ಹ ಶಾಸಕರ ವಿಚಾರ ಕುರಿತು ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ. ಆದರೆ ಈ ವಿಚಾರಕ್ಕೂ ತಾವು ಸಿಎಂ ಭೇಟಿಯಾದುದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Facebook Comments