ಬ್ರಹ್ಮಗಿರಿ ದುರಂತ : ಅರ್ಚಕರ ಕಾರುಗಳು ಪತ್ತೆ, ಮುಂದುವರೆದ ಶೋಧ

ಈ ಸುದ್ದಿಯನ್ನು ಶೇರ್ ಮಾಡಿ

ಮಡಿಕೇರಿ,ಆ.11- ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿದು ಕಣ್ಮರೆಯಾಗಿದ್ದವರಿಗೆ ಎನ್‍ಡಿಆರ್‍ಎಫ್ ತಂಡ ತೀವ್ರ ಶೋಧ ನಡೆಸುತ್ತಿದ್ದು, ಕಣ್ಮರೆಯಾಗಿರುವ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರು ಬಳಸುತ್ತಿದ್ದ ಎರಡು ಕಾರುಗಳು ಇಂದು ಪತ್ತೆಯಾಗಿವೆ.

ಕಳೆದ ನಾಲ್ಕು ದಿನಗಳಿಂದ ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆಯಿಂದಲೇ ಕಣ್ಮರೆಯಾದವರಿಗೆ ತೀವ್ರ ಹುಡುಕಾಟ ಪ್ರಾರಂಭಿಸಿದ್ದಾರೆ.

ಕಾರ್ಯಾಚರಣೆ ವೇಳೆ ನಾರಾಯಣ ಆಚಾರ್ ಬಳಸುತ್ತಿದ್ದ ರೆನಾಲ್ಟ್ ಡಸ್ಟರ್ ಹಾಗೂ ಮತ್ತೊಂದು ಓಮ್ನಿ ಕಾರುಗಳು ಪತ್ತೆಯಾಗಿವೆ. ಎರಡೂ ಕಾರುಗಳು ಸಂಪೂರ್ಣ ನುಜ್ಜು-ಗುಜ್ಜಾಗಿವೆ.

ನಾರಾಯಣ ಆಚಾರ್ ಶೆಡ್‍ನಲ್ಲಿದ್ದ ಎರಡು ಕಾರುಗಳು ಇಂದು ಕಾರ್ಯಚರಣೆ ವೇಳೆ ಪತ್ತೆಯಾಗಿದೆ. ಜೊತೆಗೆ ಅರ್ಚಕರಿಗೆ ಸೇರಿದ ವಸ್ತುಗಳು ಪತ್ತೆಯಾಗುತ್ತಿವೆ. ಆದರೆ ಇನ್ನೂ ನಾರಾಯಣ ಆಚಾರ್ ಹಾಗೂ ಉಳಿದ ನಾಲ್ವರ ಮೃತದೇಹ ಪತ್ತೆಯಾಗಿಲ್ಲ.

ಈಗಾಗಲೇ ಘಟನಾ ಸ್ಥಳದಲ್ಲಿ ಜೆಸಿಬಿ ಹಾಗೂ ಹಿಟಾಚಿಗಳು ತೀವ್ರ ಶೋಧ ನಡೆಸುತ್ತಿದ್ದು, ಒಟ್ಟು 60 ಸಿಬ್ಬಂದಿಗಳು ಉಳಿದ ನಾಲ್ವರ ಕುರುಹುಗಾಗಿ ಶೋಧ ಮಾಡುತ್ತಿದ್ದಾರೆ.

ಮೊನ್ನೆ ಸಿಕ್ಕ ಅನಂದ್ ತೀರ್ಥ ಅವರ ಮೃತದೇಹವನ್ನು ಇಂದು ಅಂತ್ಯಕ್ರಿಯೆ ಮಾಡುವ ಸಾಧ್ಯತೆ ಇದೆ.

Facebook Comments

Sri Raghav

Admin