ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರಿಗೆ ಲಾಸ್ಟ್ ವಾರ್ನಿಂಗ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.12- ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಸರ್ಕಾರಿ ಅಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರು ಒಂದು ತಿಂಗಳೊಳಗಾಗಿ ಹಿಂದಿರುಗಿಸಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ಹೂಡುವ ಎಚ್ಚರಿಕೆಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ನೀಡಿದ್ದಾರೆ.

ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ, ದೂರು ಸ್ವೀಕೃತವಾದರೆ ಅಂತಹ ಸರ್ಕಾರಿ ಅಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ಹೂಡುವುದಲ್ಲದೆ ಸರ್ಕಾರಕ್ಕೆ ಅವರಿಂದ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದಿದ್ದಾರೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಅವರು ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಕಾರ, ವಿಶ್ವವಿದ್ಯಾನಿಲಯ, ಸಂಸ್ಥೆಯ ಅಕಾರಿ ನೌಕರರು ಮತ್ತು ಅವಲಂಬಿತ ಕುಟುಂಬ ವರ್ಗದವರು ಬಡತನ ರೇಖೆಗಿಂತ ಕೆಳಗಿರುವವರಿಗೆ ವಿತರಿಸುವ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡು ಸರ್ಕಾರದಿಂದ ನೀಡುವ ಪಡಿತರ ಮತ್ತು ಇನ್ನಿತರ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಒಬ್ಬ ಸರ್ಕಾರಿ ನೌಕರನಿಗೆ ಇದು ತರವಲ್ಲದ ವರ್ತನೆಯಾಗಿದೆ. ಬಡವರಿಗೆ ಮಾತ್ರ ನೀಡಬೇಕಾಗಿದ್ದು , ಒಬ್ಬ ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ.

ಸರ್ಕಾರಿ ಅಕಾರಿ ನೌಕರ ಸರ್ಕಾರದಿಂದ ವೇತನ, ಭತ್ಯೆಗಳನ್ನು ಪಡೆಯುವುದರಿಂದ ಯಾವ ರೀತಿಯಲ್ಲೂ ಬಡತನ ರೇಖೆಗಿಂತ ಕೆಳಗೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಒಂದು ವೇಳೆ ಸರ್ಕಾರಿ ಅಥವಾ ಸರ್ಕಾರದ ಸಂಸ್ಥೆಗಳ ಅಕಾರಿಗಳು, ನೌಕರರು ಅಥವಾ ಅವರ ಅವಲಂಬಿತ ಕುಟುಂಬ ಸದಸ್ಯರು ಈಗಾಗಲೇ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿದ್ದರೆ ಇನ್ನೊಂದು ತಿಂಗಳೊಳಗಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಹಿಂದಿರುಗಿಸಿ ರದ್ದುಪಡಿಸಿಕೊಳ್ಳಬೇಕೆಂದು ಆದೇಶಿಸಿದ್ದಾರೆ.

Facebook Comments

Sri Raghav

Admin