ವಕೀಲರ ಕಚೇರಿ ತೆರೆಯಲು ಸರ್ಕಾರ ಅನುಮತಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 26- ನ್ಯಾಯಾಲಯದ ಕಾರ್ಯಕಲಾಪಗಳ ಅವಧಿಯಲ್ಲಿ ವಕೀಲರ ಕಚೇರಿಯನ್ನು ತೆಯಲು ಸರ್ಕಾರ ಅನುಮತಿ ನೀಡಿದೆ ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ತಿಳಿಸಿದ್ದಾರೆ. ನ್ಯಾಯಾಲಯದ ಕಾರ್ಯಕಲಾಪಗಳಲ್ಲಿ ಭಾಗವಹಿಸಲು ಹಾಗೂ ವಕೀಲರ ಕಚೇರಿಯನ್ನು ತೆಯಲು ಅನುಮತಿ ಕೋರಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಬೆಂಗಳೂರು ವಕೀಲರ ಸಂಘವು ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ಸರ್ಕಾರವು ಇಂದು ಆದೇಶವನ್ನು ಹೊರಡಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋರ್ಟಿನ ಕಾರ್ಯ ಕಲಾಪಗಳ ಅವಧಿಯಲ್ಲಿ ವಕೀಲರಿಗೆ ಕಚೇರಿ ತೆರೆಯಲು ಹಾಗೂ ಶೇ. 50 ರಷ್ಟು ಸಿಬ್ಬಂದಿಗಳ ಜೊತೆ ಕಾರ್ಯ ನಿರ್ವಹಿಸಲು ಅವಕಾಶ ನೀಡಿದೆ. ಸಂಚಾರದ ಅವಧಿಯಲ್ಲಿ ಅಗತ್ಯ ಗುರುತಿನ ಚೀಟಿ ಹೊಂದಿರಲು ಆದೇಶ ನೀಡಿದೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಸ್ಪಂದಿಸಿರುವ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಿಗೆ , ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ,ಕಾನೂನು ಕಾರ್ಯದರ್ಶಿಗಳಿಗೂ ಹಾಗೂ ಅಡ್ವೋಕೇಟ್ ಜನರಲ್ ಅವರಿಗೆ ಬೆಂಗಳೂರು ವಕೀಲರ ಸಂಘದ ಪರವಾಗಿ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

Facebook Comments