ಲಾಕ್ ಡೌನ್ ಹಿನ್ನೆಲೆಯಲ್ಲಿ ವಾಹನ ತೆರಿಗೆ ಪಾವತಿಸಲು ಕಾಲಾವಕಾಶ : ಸವದಿ

ಈ ಸುದ್ದಿಯನ್ನು ಶೇರ್ ಮಾಡಿ

ಕೋವಿಡ್ – 19ರ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಿರುವುದರಿಂದ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಜೂನ್ ಒಂದರವರೆಗೂ ಕಾಲಾವಕಾಶ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 4(1)ರ ನಿಯಮಗಳನ್ನು ಸಡಿಲಗೊಳಿಸಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಅವಕಾಶ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಏ.15 ಮತ್ತು ಮೇ 15 ಒಳಗಾಗಿ ಪಾವತಿಸಬೇಕಾಗಿದ್ದ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಜೂನ್ ಒಂದವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.

ವಾಹನ ಮಾಲೀಕರು ಇದನ್ನು ಸದುಪಯೋಗ ಪಡೆಸಿಕೊಂಡು ಲಾಕ್ ಡೌನ್ ಅನ್ನು ಯಶಸ್ವಿಗೊಳಿಸುವ ಮೂಲಕ ಕರೋನಾ ಪಿಡುಗನ್ನು ತಡೆಗಟ್ಟುವ ಸರ್ಕಾರದ ಪ್ರಯತ್ನಕ್ಕೆ ಸಹಕರಿಸಬೇಕೆಂದು ಸವದಿ ಮನವಿ ಮಾಡಿದ್ದಾರೆ.

Facebook Comments

Sri Raghav

Admin