ಕತ್ತಿ ಸಚಿವ ಸ್ಥಾನ ನೀಡುವ ಬಗ್ಗೆ ಡಿಸಿಎಂ ಸವದಿ ಹೇಳಿದ್ದೇನು ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಡಿ.13- ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಿದರೆ ಬೆಳಗಾವಿ ಜಿಲ್ಲೆಗೆ ಆರು ಸಚಿವ ಸ್ಥಾನ ಸಿಕ್ಕಂತಾಗುತ್ತದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದರು.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಬಿಟ್ಟರೆ ಹೆಚ್ಚು ಸಚಿವ ಸ್ಥಾನ ಬೆಳಗಾವಿ ಜಿಲ್ಲೆಗೆ ನೀಡಿದಂತಾಗುತ್ತದೆ ಎಂದರು.

ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ವಹಿಸಿದ ಕೆಲಸವನ್ನು ಶ್ರದ್ದೆಯಿಂದ ಮಾಡುವುದಷ್ಟೇ ನನ್ನ ಕೆಲಸ ಎಂದು ಹೇಳಿದರು.  ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿಗಳ ಪರಮಾಧಿಕಾರ. ಯಾರನ್ನು ತೆಗೆದುಕೊಳ್ಳಬೇಕು, ಬಿಡಬೇಕು ಎಂಬುದು ಅವರ ವಿವೇಚನೆಗೆ ಬಿಟ್ಟಿದ್ದು. ಡಿಸಿಎಂ ಹುದ್ದೆ ಸೃಷ್ಟಿ ಪಕ್ಷದ ವರಿಷ್ಠರ ನಿರ್ಣಯ ಎಂದು ಹೇಳಿದರು.

ಉಪಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಮೂರು ಮಂದಿ ಗೆದ್ದಿದ್ದಾರೆ. ಈ ಮೂವರು ಸೇರಿದಂತೆ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ದೊರೆತರೆ ಜಿಲ್ಲೆಯಲ್ಲಿ ಆರು ಜನರಿಗೆ ಸಚಿವ ಸ್ಥಾನ ದೊರೆತಂತಾಗುತ್ತದೆ ಎಂದು ತಿಳಿಸಿದರು.

Facebook Comments