ಸಾರಿಗೆ ವಾಹನಗಳಿಗೆ ಶೇ. 50 ರಷ್ಟು ತೆರಿಗೆ ವಿನಾಯ್ತಿ

ಈ ಸುದ್ದಿಯನ್ನು ಶೇರ್ ಮಾಡಿ

ಕೋವಿಡ್-19 ರ 2ನೇ ಅಲೆಯ ಹಿನ್ನೆಲೆಯಲ್ಲಿ, ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಜೂನ್ 2021ರ ಮಾಹೆಗೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯ ಶೇಕಡ 50 ರಷ್ಟಕ್ಕೆ ವಿನಾಯಿತಿ ನೀಡಿ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

Facebook Comments

Sri Raghav

Admin