ಬೋನಿಗೆ ಬಿತ್ತು ಮತ್ತೊಂದು ನರಭಕ್ಷಕ ಚಿರತೆ..!

ಈ ಸುದ್ದಿಯನ್ನು ಶೇರ್ ಮಾಡಿ

ಕೊಪ್ಪಳ, ಜ.18- ಜಿಲ್ಲಾಯ ಗಂಗಾವತಿ ತಾಲೂಕಿನ ದುರ್ಗಾ ಬೆಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬೆಳಗ್ಗೆ ಮೂರು ಗಂಟೆ ಸುಮಾರಿಗೆ ಚಿರತೆಯೊಂದು ಬಿದ್ದಿದೆ.
ಬೆಳಗ್ಗೆ ದೇಗುಲದ ಸಿಬ್ಬಂದಿ ಯುವಕರು ಬೋನಿನಲ್ಲಿ ಸೆರೆಯಾದ ಚಿರತೆಯನ್ನು ಗಮನಿಸಿದ್ದಾರೆ. ಬಳಿಕ ದೇಗುಲದ ಪ್ರಧಾನ ಅರ್ಚಕರ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕೆ ಆಗಮಿಸಿದ ದೇಗುಲದ ಸಿಬ್ಬಂದಿ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಇದೇ ದುರ್ಗಾ ಬೆಟ್ಟದಲ್ಲಿ ಕಳೆದ ಡಿಸೆಂಬರ್‍ನಲ್ಲಿ ಚಿರತೆಯೊಂದು ಸೆರೆಯಾಗಿತ್ತು. ಎರಡನೆ ಚಿರತೆ ಇದಾಗಿದ್ದು, ಬೆಟ್ಟದಲ್ಲಿ ಸೆರೆಯಾಗಿದೆ. ಇನ್ನೂ ಎಷ್ಟು ಚಿರತೆಗಳಿವೆ ಎಂಬುದರ ಬಗ್ಗೆ ಮಾಹಿತಿ ದೊರೆತಿಲ್ಲ. ಆದರೆ, ಜನರಲ್ಲಿ ಚಿರತೆಗಳ ಬಗ್ಗೆ ಆತಂಕ ಮಾತ್ರ ದೂರವಾಗಿಲ್ಲ.

Facebook Comments