ಪದವೀಧರರಿಗೆ ಗುಡ್ ನ್ಯೂಸ್, ಎಲ್ಐಸಿಯಲ್ಲಿ 8000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ..!

ಈ ಸುದ್ದಿಯನ್ನು ಶೇರ್ ಮಾಡಿ

ಲೈಫ್ ಇನ್ಶುರೆನ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ (ಎಲ್ಐಸಿ) ನಲ್ಲಿ ಖಾಲಿ ಇರುವ 8581 ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 09-06-2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಭಾರತದ ಜೀವ ವಿಮಾ ನಿಗಮ (ಎಲ್ಐಸಿ) ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ ನಿಂದ ಪದವಿಯನ್ನು ಪೂರ್ಣಗೊಳಿಸಬೇಕು ಅಥವಾ ಅದರ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣಕ್ಕೆ ಸಂಬಂಧಿತ ನೀಡಲಾದ ಪ್ರಮಾಣಪತ್ರ.

ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ಮೂಲಕ ಪಾವತಿಸಬಹುದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಜುಲೈ 1, 2019 ರಂತೆ 21 ರಿಂದ 30 ವರ್ಷಗಳು ಮೀರಬಾರದು. ಆಯ್ಕೆ ಪ್ರಕಿಯೆ ಆನ್ ಲೈನ್ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಮತ್ತು ಆನ್ಲೈನ್ ​​ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಸಂದರ್ಶನ (ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ) ಮತ್ತು ನಂತರದ ಪೂರ್ವ ನೇಮಕಾತಿ ವೈದ್ಯಕೀಯ ಪರೀಕ್ಷೆ.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಗೆ  ಭೇಟಿಕೊಡಿ: https://www.licindia.in/Bottom-Links/Careers/Recruitment-of-Apprentice

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ