ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಕೋರಿದ್ದ ಕಡತ ವಾಪಸ್ ಕಳಿಸಿದ ಕೇಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

Lingayata--011

ಬೆಂಗಳೂರು, ಜೂ. 10- ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಕೋರಿ ರಾಜ್ಯ ಸರ್ಕಾರ, ಕೇಂದ್ರಕ್ಕೆ ಕಳುಹಿಸಿದ್ದ ಕಡತವನ್ನು ವಾಪಸ್ ಕಳುಹಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರದ ವೇಳೆ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ರಾಜ್ಯ ಅಲ್ಪಸಂಖ್ಯಾತ ಇಲಾಖೆಗೆ ಕಡತವನ್ನು ಕೇಂದ್ರ ಸರ್ಕಾರ ವಾಪಸ್ ಕಳುಹಿಸಿದೆ.ಹಿಂದೂ ಧರ್ಮವನ್ನು ವಿಭಜನೆ ಮಾಡಬಾರದು ಎಂಬ ಒತ್ತಾಯಕ್ಕೆ ಕೇಂದ್ರ ಸರ್ಕಾರ ಮನ್ನಣೆ ನೀಡಿದೆ. ಕೇಂದ್ರ ಅಲ್ಪಸಂಖ್ಯಾತ ಇಲಾಖೆಯಿಂದ ಕಡತ ವಾಪಸ್ ಬಂದಿದೆ. ರಾಜ್ಯಸರ್ಕಾರದಿಂದ ಮತ್ತೊಮ್ಮೆ ಕೇಂದ್ರಕ್ಕೆ ಕಳುಹಿಸುವುದು ಅನುಮಾನ.

ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ವಿಚಾರ ರಾಜ್ಯಾದ್ಯಂತ ಚರ್ಚೆಗೆ ಹುಟ್ಟುಹಾಕಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇದೇ ಪ್ರಧಾನವಾದ ವಿಷಯವಾಗಿತ್ತು ಕೂಡ. ನಿವೃತ್ತ ನ್ಯಾ.ಎಚ್.ಎನ್.ನಾಗಮೋಹನ್‍ದಾಸ್ ನೇತೃತ್ವದ ತಜ್ಞರ ಸಮಿತಿ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕೆಂದು ರಾಜ್ಯಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಈ ಶಿಫಾರಸ್ಸಿನನ್ವಯ ಕೇಂದ್ರ ಸರ್ಕಾರಕ್ಕೆ ಕಡತವನ್ನು ಕಳುಹಿಸಿಕೊಡಲಾಗಿತ್ತು. ಈಗ ಆ ಕಡತವನ್ನು ಕೇಂದ್ರ ಸರ್ಕಾರ ವಾಪಸ್ ಕಳುಹಿಸಿದೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಪರ ನಿಲ್ಲದ ಲಿಂಗಾಯತ ಸಮುದಾಯದ ಬಂಡಾಯ, ಭಿನ್ನಮತ ಎದುರಿಸುತ್ತಿರುವ ಕಾಂಗ್ರೆಸ್‍ಗೆ ಇದು ಮತ್ತೊಂದು ಶಾಕ್ ಆಗಿದೆ. ಎಂ.ಬಿ.ಪಾಟೀಲ್, ಬಸವರಾಜರಾಯರೆಡ್ಡಿ, ಬಸವರಾಜ್ ಹೊರಟ್ಟಿ, ಶರಣಪ್ರಕಾಶ್ ಪಾಟೀಲ್,ವಿನಯ್‍ಕುಲಕರ್ಣಿ ಸೇರಿ ಹಲವರು ಲಿಂಗಾಯತ ಧರ್ಮದ ಪರ ನಿಂತಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಈಶ್ವರ್‍ಖಂಡ್ರೆ ವೀರಶೈವ -ಲಿಂಗಾಯತ ಧರ್ಮ ಮಾನ್ಯತೆಗೆ ಆಗ್ರಹಿಸಿದ್ದರು.

Facebook Comments

Sri Raghav

Admin