BIG BREAKING : ಮದ್ಯ ಪ್ರಿಯರಿಗೆ ಕಿಕ್ಕೇರಿಸುತ್ತೆ ಈ ಗುಡ್ ನ್ಯೂಸ್..! ರಾಜ್ಯದಾದ್ಯಂತ ಎಣ್ಣೆ ಅಂಗಡಿ ಓಪನ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಮೇ. 3. ಮಹತ್ವದ ನಿರ್ಧಾರದಲ್ಲಿ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಕಡೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಎಲ್ಲಾ ಸಾಧಕ-ಬಾದಕಗಳನ್ನು ಚರ್ಚಿಸಿ ಜನರಿಗೆ ಹೊಸ ರಿಲೀಫ್ ನೀಡಿದ್ದಾರೆ.

ಇದರ ನಡುವೆ ಟ್ಯಾಕ್ಸಿ ಹಾಗೂ ಕ್ಯಾಬ್ ಸೇವೆಯನ್ನು ಕೂಡ ಅನುಮತಿ ನೀಡಲಾಗಿದೆ. ಈಗಾಗಲೇ ದಿನಸಿ ಅಂಗಡಿಗಳು ಎಲೆಕ್ಟ್ರಾನಿಕ್ ಹಾರ್ಡ್ವೇರ್ ಸ್ಟೋರ್ ಗಳು ಹಣ್ಣು-ತರಕಾರಿ ಅಂಗಡಿಗಳನ್ನು ಆರಂಭಿಸಲು ಸರ್ಕಾರ ಅವಕಾಶ ನೀಡಿತ್ತು.

ಆದರೀಗ ರಾಜ್ಯ ಬೊಕ್ಕಸ ತುಂಬಿಕೊಳ್ಳುವ ನಿಟ್ಟಿನಲ್ಲಿ ಮಧ್ಯ ಪ್ರಿಯರಿಗೆ ಸಿಹಿ ಸುದ್ದಿ ನೀಡಿ ರಾಜ್ಯದ ಎಲ್ಲಾ ಭಾಗಗಳಲ್ಲೂ ಮದ್ಯದಂಗಡಿ ತೆರೆಯಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ಮಹತ್ವದ ನಿರ್ಧಾರದಲ್ಲಿ ಮೇ 17ರವರೆಗೆ ಸಮೂಹ ಸಾರಿಗೆ, ಚಿತ್ರಮಂದಿರ ಮತ್ತು ಮಾಲ್ ಗಳು ಇರುವುದಿಲ್ಲ ಎಂದು ತಿಳಿಸಲಾಗಿದೆ.

# ವಾಣಿಜ್ಯ ಚಟುವಟಿಕೆ ಆರಂಭ :
ಕಂಟೇನ್ ಮೆಂಟ್ ಝೋನ್ ಹೊರತು ಪಡಿಸಿ ಇತರ ಕಡೆಗಳಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಜಿಲ್ಲೆಗಳಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ಆರಂಭಿಸಲು ರಾಜ್ಯ ಸರ್ಕಾರದ ಮುಂದಾಗಿದೆ.

ಶನಿವಾರ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ. ಅವರು,ಕೋವಿಡ್ 19 ನಿಯಂತ್ರಣ ಹಾಗೂ ಲಾಕ್ ಡೌನ್ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರವೇ ರಾಜ್ಯದಲ್ಲೂ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

ಪ್ರಸ್ತುತ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ವಿವಿಧ ವಲಯಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಮರು ಪ್ರಾರಂಭ ಮಾಡಲಾಗುತ್ತಿದೆ. ಇದರಿಂದ ಬಹುತೇಕ ಕಾರ್ಮಿಕರಿಗೆ ಮತ್ತೆ ಉದ್ಯೋಗ ದೊರೆಯಲಿದೆ ಎಂದು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಅಧಿಕಾರಿಗಳು ತಕ್ಷಣವೇ ಕ್ರಮ ವಹಿಸಲು ಸೂಚನೆ ಕೊಟ್ಟರು.

ಇದಕ್ಕೂ ಮುನ್ನ ರಾಜ್ಯದಲ್ಲಿ ನೆಲೆಸಿರುವ ಒಡಿಶಾ ರಾಜ್ಯದ ವಲಸೆ ಕಾರ್ಮಿಕರನ್ನು ಒಡಿಶಾಕ್ಕೆ ಕಳುಹಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು.

ರಾಜ್ಯದಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಕಾರ್ಮಿಕರು ಹಸಿವಿನಿಂದ ಬಳಸದಂತೆ ಎಚ್ಚರ ವಹಿಸಲಾಗಿದೆ. ಹೊರ ರಾಜ್ಯಗಳಿಗೆ ಕಾರ್ಮಿಕರನ್ನು ಕಳುಹಿಸುವ ಕುರಿತು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅವರು ಒಡಿಶಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಸಮನ್ವಯ ನಿರ್ವಹಿಸುವರು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಒಡಿಶಾ ರಾಜ್ಯಕ್ಕೆ ಹಿಂತಿರುಗುವ ಕಾರ್ಮಿಕರ ವಿವರ, ಅವರ ಆರೋಗ್ಯ ತಪಾಸಣೆ ಹಾಗೂ ಅವರ ಕ್ವಾರಂಟೈನ್ ವ್ಯವಸ್ಥೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಲಾಯಿತು.ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕೆಂದು ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಹೊರ ಜಿಲ್ಲೆಗಳಿಂದ ಆಗಮಿಸಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡುವಂತೆ ತಿಳಿಸಲಾಯಿತು.ಲಾಕ್ ಡೌನ್ ಸಂದರ್ಭದಲ್ಲಿ ಬೇರೆ ಊರಿನಲ್ಲಿ ಸಿಲುಕಿಕೊಂಡವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂತಿರುಗಲು ಒಂದು ದಿನಕ್ಕೆ, ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನಿಸಲಾಯಿತು.

ನೇಕಾರರ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಪ್ರತ್ಯೇಕ ಸಭೆ ಕರೆದು ಚರ್ಚಿಸುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದರು.ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Facebook Comments

Sri Raghav

Admin