ಲಾಕ್ ಡೌನ್ ಪ್ಯಾಕೇಜ್ ಘೋಷಣೆ ಬಗ್ಗೆ ಸಿಎಂ ಹೇಳಿದ್ದೇನು ಗೊತ್ತೇ…?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು – ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಿರುವ ಪರಿಣಾಮ ಸಂಕಷ್ಟದಲ್ಲಿರುವ ಶ್ರಮಿಕ ವರ್ಗಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಇನ್ನು ಯಾವುದೇ ತೀರ್ಮಾನ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದಿಲ್ಲಿ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ರಾಜ್ಯದಲ್ಲಿ ಲಾಕ್ ಡೌನ್ ನಿಯಂತ್ರಣಕ್ಕೆ ಬರಲಿ. ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಮುಂದೆ ನೋಡೋಣ ಎಂದು ತಿಳಿಸಿದರು.

ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಎಲ್ಲಾ ರೀತಿಯ ನೆರವು ಸಿಗುತ್ತಿದ್ದು,ತಾವು ಅಲ್ಲಿಗೆ ಹೋಗಬೇಕಾದ ಅಗತ್ಯವಿಲ್ಲ. ಇಲ್ಲಿಯೇ ಇದ್ದು ಪರಿಸ್ಥಿತಿಯನ್ನು ನಿಬಾಯಿಸುವುದಾಗಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ನಮ್ಮ ರಾಜ್ಯಕ್ಕೆ ಅಗತ್ಯವಿರುವ ನೆರವನ್ನು ನೀಡಲು ಮುಂದೆ ಬಂದಿದ್ದಾರೆ.

ಪ್ರಧಾನಿ ಅವರೇ ನನಗೆ ದೂರವಾಣಿ ಕರೆ ಮಾಡಿ ಇಲ್ಲಿನ‌ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದರು. ನಮ್ಮ ಗೃಹ ಸಚಿವ ಬಸವರಾಜ್ ಬೊಮ್ಮಯಿ ಅವರು ದೆಹಲಿಗೆ ತೆರಳಿ ಕರ್ನಾಟಕದ ಪರಿಸ್ಥಿತಿಯ ವಿವರಣೆ ನೀಡಿದ್ದಾರೆ. ಕೇಂದ್ರವು ನಮಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲು ಸಿದ್ದವಿದೆ ಎಂದು ಹೇಳಿದರು.

ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಸೋಂಕಿನ ಪ್ರಕರಣಗಳು ಕೊಂಚ ಇಳಿಮುಖವಾಗುತ್ತವೆ.ಪೊಲೀಸರು ಲಾಠಿ ಎತ್ತದಂತೆ ಇಲ್ಲವೇ ವಾಹನಗಳನ್ನು ವಶಕ್ಕೆ ಪಡೆಯದಂತೆ ಸಾರ್ವಜನಿಕರು ಸಹಕಾರ ಕೊಡಬೇಕು ಎಂದು ಯಡಿಯೂರಪ್ಪ ಅವರು ಮನವಿ ಮಾಡಿದರು. ಸರಕಾರದ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಚಾಚು ತಪ್ಪದೆ ಪಾಲನೆ ಮಾಡಬೇಕು. ರಾಜ್ಯವನ್ನು ಕೊರೊನಾ ಮುಕ್ತಗೊಳಿಸಲು ಎಲ್ಲರೂ ಕೈ ಜೋಡಿಸೋಣ ಎಂದು ಪ್ರಾರ್ಥಿಸಿದರು.

Facebook Comments

Sri Raghav

Admin