Saturday, April 20, 2024
Homeರಾಷ್ಟ್ರೀಯಸಂಸತ್‍ನಲ್ಲಿ ಮತ್ತೆ ಪ್ರತಿಧ್ವನಿಸಿದ ಭದ್ರತಾ ಲೋಪ, ಕಲಾಪ ಮುಂದೂಡಿಕೆ

ಸಂಸತ್‍ನಲ್ಲಿ ಮತ್ತೆ ಪ್ರತಿಧ್ವನಿಸಿದ ಭದ್ರತಾ ಲೋಪ, ಕಲಾಪ ಮುಂದೂಡಿಕೆ

ನವದೆಹಲಿ,ಡಿ.18- ಕಳೆದ ವಾರ ಸಂಸತ್ತಿನ ಭದ್ರತೆ ಉಲ್ಲಂಘನೆ ವಿಚಾರವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆ ಮತ್ತು ರಾಜೀನಾಮೆಗೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯಿಂದಾಗಿ ಸಂಸತ್‍ನ ಉಭಯ ಸದನಗಳನ್ನು ಮುಂದೂಡಲಾಯಿತು.ಬೆಳಗ್ಗೆ ಸದನ ಆರಂಭವಾ ಗುತ್ತಿದ್ದಂತೆ ಪ್ರತಿಪಕ್ಷಗಳು ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕೆಂದು ಪಟ್ಟು ಹಿಡಿದು ಗದ್ದಲ ಎಬ್ಬಿಸಿದವು. ಇದರಿಂದ ಮೊದಲು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು. ಸಂಸತ್ತಿನ ಭದ್ರತಾ ಉಲ್ಲಂಘನೆ ವಿಚಾರವಾಗಿ ಪ್ರತಿಪಕ್ಷಗಳ ಗದ್ದಲದ ನಡುವೆ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮತ್ತೆ ಮುಂದೂಡಲಾಯಿತು.

ಶನಿವಾರ ನಿಧನರಾದ ಕುವೈತ್‍ನ ಎಮಿರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರಿಗೆ ಸದನವು ಶ್ರದ್ಧಾಂಜಲಿ ಸಲ್ಲಿಸಿದ ನಂತರ, ಡಿಸೆಂಬರ್ 13ರಂದು ಭದ್ರತಾ ಉಲ್ಲಂಘನೆಯ ಘಟನೆಯ ನಂತರ ಲೋಕಸಭೆಯ ಸೆಕ್ರೆಟರಿಯೇಟ್ ತೆಗೆದುಕೊಂಡ ಕ್ರಮಗಳ ಬಗ್ಗೆ ಸ್ಪೀಕರ್ ಓಂ ಬಿರ್ಲಾ ಅವರು ಸದನಕ್ಕೆ ತಿಳಿಸಿ, ಸದನವನ್ನು ಸುಗಮವಾಗಿ ನಡೆಸಲು ಎಲ್ಲ ಸದಸ್ಯರ ಸಹಕಾರ ಕೋರಿದರು.

ಆದರೆ, ವಿರೋಧ ಪಕ್ಷದ ಸದಸ್ಯರು ಗೃಹ ಸಚಿವ ಶಾ ಅವರ ಹೇಳಿಕೆ ಮತ್ತು ರಾಜೀನಾಮೆಗೆ ಒತ್ತಾಯಿಸಿದರು. ಪ್ರತಿಪಕ್ಷದ ಕೆಲವು ಸಂಸದರು ತಮ್ಮ ಬೇಡಿಕೆಗಳಿರುವ ಫಲಕಗಳನ್ನು ಸಹ ಹಿಡಿದುಕೊಂಡಿದ್ದರು.ಸದನದೊಳಗೆ ಭಿತ್ತಿಪತ್ರ ತರುವುದನ್ನು ವಿರೋಧಿಸಿದ ಲೋಕಸಭಾಧ್ಯಕ್ಷ ಓಂ ಬಿರ್ಲಾ, ಇದು ಸದನದ ಘನತೆಯನ್ನು ಕುಗ್ಗಿಸುತ್ತದೆ ಎಂದರು.

ಕಾಂಗ್ರೆಸ್ ಆಡಳಿತದಲ್ಲಿ ಬೆಂಗಳೂರು ಉಗ್ರರ ಸ್ಲೀಪರ್‌ಸೆಲ್ ಆಗಿದೆ : ಯತ್ನಾಳ್

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಭಿತ್ತಿಪತ್ರಗಳನ್ನು ಬೀಸದಂತೆ ಪ್ರತಿಪಕ್ಷದ ಸದಸ್ಯರಿಗೆ ಕೈಮುಗಿದು ಮನವಿ ಮಾಡಿಕೊಂಡರು. ಭಿತ್ತಿಪತ್ರಗಳನ್ನು ಹಿಡಿದುಕೊಳ್ಳದಂತೆ ವ್ಯವಹಾರ ಸಲಹಾ ಸಮಿತಿಯ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು. ವಿರೋಧ ಪಕ್ಷದ ಸಂಸದರು ಸಭಾಧ್ಯಕ್ಷ ಓಂ ಬಿರ್ಲಾ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಮನವಿಯನ್ನು ನಿರ್ಲಕ್ಷಿಸಿದರು ಮತ್ತು ಘೋಷಣೆಗಳೊಂದಿಗೆ ತಮ್ಮ ಪ್ರತಿಭಟನೆ ಮುಂದುವರೆಸಿದರು. ಇದರಿಂದಾಗಿ ಸ್ಪೀಕರ್ 12 ಗಂಟೆವರೆಗೆ ಸದನದ ಕಲಾಪ ಮುಂದೂಡಿದರು.

ಕಳೆದ ಬುಧವಾರ 2001ರ ಸಂಸತ್ತಿನ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವ ದಿನ ಪ್ರಮುಖ ಭದ್ರತಾ ಉಲ್ಲಂಘನೆಯಲ್ಲಿ, ಸಾಗರ್ ಶರ್ಮಾ ಮತ್ತು ಮನೋರಂಜನ್.ಡಿ ಎಂಬುವರು ಶೂನ್ಯ ವೇಳೆಯಲ್ಲಿ ಸಾರ್ವಜನಿಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‍ಗೆ ಜಿಗಿದು ಬಣ್ಣದ ಹೊಗೆಯನ್ನು ಹರಡಿ ಘೋಷಣೆಗಳನ್ನು ಕೂಗಿದ್ದರು. ಈ ವೇಳೆ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿತ್ತು.

RELATED ARTICLES

Latest News