ತಣ್ಣಗಾಯ್ತು ಎಲೆಕ್ಷನ್ ಬಿಸಿ, ಹೆಚ್ಚಾಯ್ತು ರಿಸಲ್ಟ್ ಟೆನ್ಷನ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.23-ಕಾಂಗ್ರೆಸ್-ಜೆಡಿಎಸ್ ಮಿತ್ರ ಪಕ್ಷಗಳು ಹಾಗೂ ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ಪ್ರತಿಷ್ಠೆಯಾಗಿದ್ದ ಪ್ರಸಕ್ತ ಲೋಕಸಭೆ ಚುನಾವಣೆಯ ಮತದಾನ ರಾಜ್ಯದಲ್ಲಿ ಇಂದು ಸಂಜೆ ಮುಗಿಯಲಿದ್ದು, ಫಲಿತಾಂಶಕ್ಕಾಗಿ ಇನ್ನು ಒಂದು ತಿಂಗಳು ಕಾಯಬೇಕಾಗಿದೆ.

ರಾಜ್ಯದ ಉತ್ತರ ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ದಕ್ಷಿಣ ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಏ.18 ರಂದು ಮತದಾನ ನಡೆದಿತ್ತು. ರಾಜ್ಯದಲ್ಲಿ ನಡೆದ ಎರಡೂ ಹಂತದ ಮತ ಎಣಿಕೆ ಮೇ 23 ರಂದು ನಡೆಯಲಿದ್ದು, ಅಂದು ಫಲಿತಾಂಶ ಹೊರಬೀಳಲಿದೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಚುನಾವಣಾ ಕಣದಲ್ಲಿ ಒಟ್ಟು 478 ಅಭ್ಯರ್ಥಿಗಳು ಇದ್ದಾರೆ. ಮೊದಲ ಹಂತದ 14 ಕ್ಷೇತ್ರಗಳಲ್ಲಿ 241 ಅಭ್ಯರ್ಥಿಗಳಿದ್ದರೆ, ಎರಡನೇ ಹಂತದ ಕ್ಷೇತ್ರಗಳಲ್ಲಿ 237 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, 21 ಕ್ಷೇತ್ರಗಳಲ್ಲಿ ಕಾಂಗ್ರೆಸ್, ಏಳು ಕ್ಷೇತ್ರಗಳಲ್ಲಿ ಜೆಡಿಎಸ್, 27 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಎರಡೂ ಹಂತದಲ್ಲೂ ಪಕ್ಷೇತರ ಅಭ್ಯರ್ಥಿಗಳೇ ಅಧಿಕ ಸಂಖ್ಯೆಯಲ್ಲಿ ಸ್ಪರ್ಧಿಸಿದ್ದರು. ಮೊದಲ ಹಂತದ ಚುನಾವಣೆಯಲ್ಲಿ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆದಿದ್ದು, ಈಗಾಗಲೇ ಮತಯಂತ್ರಗಳಲ್ಲಿ ದಾಖಲಾಗಿದೆ.

ಮೇ 23 ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಸಂಜೆ ವೇಳೆಗೆ ಫಲಿತಾಂಶ ದೊರೆಯುವ ಸಾಧ್ಯತೆಗಳಿವೆ. ಮತಯಂತ್ರಗಳನ್ನು ಆಯಾ ಕ್ಷೇತ್ರದ ಮತ ಎಣಿಕೆ ಕೇಂದ್ರದ ಸ್ಟ್ರಾಂಗ್ ರೂಂಗಳಲ್ಲಿ ಪೆÇಲೀಸ್ ಬಿಗಿ ಭದ್ರತೆಯೊಂದಿಗೆ ಇಡಲಾಗಿದೆ.

ಮತ ಎಣಿಕೆ ಕೇಂದ್ರಗಳು: ಚಿಕ್ಕೋಡಿ-ಸಿಟಿಇ ಸೊಸೈಟಿಯ ಆರ್.ಡಿ.ಪಿಯು ಕಾಲೇಜು, ಬೆಳಗಾವಿ-ರಾಣಿ ಪಾರ್ವತಿ ದೇವಿ ಕಾಲೇಜು, ಬಾಗಲಕೋಟೆ-ತೋಟಗಾರಿಕೆ ವಿಶ್ವವಿದ್ಯಾಲಯ, ವಿಜಯಪುರ-ಸೈನಿಕ ಶಾಲೆ, ಕಲಬುರಗಿ-ಗುಲ್ಬರ್ಗಾ ಯೂನಿವರ್ಸಿಟಿ, ರಾಯಚೂರು-ಎಲ್.ಬಿ.ಡಿ ಕಾಲೇಜು ಮತ್ತು ಎಸ್‍ಆರ್‍ಪಿಎಸ್ ಪಿಯು ಕಾಲೇಜು,

ಬೀದರ್-ಬಿವಿಬಿ ಕಾಲೇಜು ಮತ್ತು ಬಸವೇಶ್ವರ ಬಿ.ಎಡ್ ಕಾಲೇಜು, ಕೊಪ್ಪಳ-ಗವಿಸಿದ್ದೇಶ್ವರ ಪದವಿ ಕಾಲೇಜು, ಬಳ್ಳಾರಿ-ರಾವ್ ಬಹದ್ದೂರ್ ವೈ ಮಹಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜು, ಹಾವೇರಿ-ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಧಾರವಾಡ-ಕೃಷಿ ವಿಶ್ವವಿದ್ಯಾನಿಲಯ, ಉತ್ತರ ಕನ್ನಡ-ಕುಮಟಾದ ಡಾ.ಎ.ವಿ.ಬಾಳಿಗ ಕಾಲೇಜು, ದಾವಣಗೆರೆ-ದಾವಣಗೆರೆ ವಿಶ್ವವಿದ್ಯಾನಿಲಯ, ಶಿವಮೊಗ್ಗ-ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.

ಉಡುಪಿ-ಚಿಕ್ಕಮಗಳೂರು- ಉಡುಪಿಯ ಸೆಂಟ್ ಸಿಸಿಲಿ ಹೈಸ್ಕೂಲ್, ಹಾಸನ-ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ದಕ್ಷಿಣ ಕನ್ನಡ-ಸೂರತ್ಕಲ್‍ನ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು, ಚಿತ್ರದುರ್ಗ-ಸರ್ಕಾರಿ ವಿಜ್ಞಾನ ಕಾಲೇಜು, ತುಮಕೂರು-ತುಮಕೂರು ವಿಶ್ವವಿದ್ಯಾನಿಲಯದ ಸೈನ್ಸ್ ಕಾಲೇಜು ಮತ್ತು ಪಾಲಿಟೆಕ್ನಿಕ್ ಕಾಲೇಜು,

ಮಂಡ್ಯ-ಸರ್ಕಾರಿ ಕಾಲೇಜು, ಮೈಸೂರು-ಸರ್ಕಾರಿ ಮಹಾರಾಣಿ ಮಹಿಳಾ ಕಾಲೇಜು, ಚಾಮರಾಜನಗರ-ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಬೆಂಗಳೂರು ಗ್ರಾಮಾಂತರ-ರಾಮನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಬೆಂಗಳೂರು ಉತ್ತರ-ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮತ್ತು ಪಿಯು ಕಾಲೇಜು,

ಬೆಂಗಳೂರು ಕೇಂದ್ರ-ಮೌಂಟ್ ಕಾರ್ಮೆಲ್ ಪಿಯು ಕಾಲೇಜು, ಬೆಂಗಳೂರು ದಕ್ಷಿಣ-ಎಸ್‍ಎಸ್‍ಎಂಆರ್‍ವಿ ಪಿಯು ಕಾಲೇಜು, ಚಿಕ್ಕಬಳ್ಳಾಪುರ -ದೇವನಹಳ್ಳಿ ತಾಲೂಕಿನ ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜು, ಕೋಲಾರ-ಸರ್ಕಾರಿ ಬಾಲಕರ ಪದವಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ