ಲೋಕಪಾಲ್‍ ಸದಸ್ಯ ಅಜಯ್ ಕುಮಾರ್ ತ್ರಿಪಾಠಿ ಕಿಲ್ಲರ್ ಕೊರೋನಾಗೆ ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 3-ಭ್ರಷ್ಟಾಚಾರ ನಿಗ್ರಹ ಪ್ರಾಧಿಕಾರ ಲೋಕಪಾಲ್‍ನ ಸದಸ್ಯ ನಿವೃತ್ತ ನ್ಯಾಯಮೂರ್ತಿ ಅಜಯ್ ಕುಮಾರ್ ತ್ರಿಪಾಠಿ ಕಿಲ್ಲರ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಎ.ಕೆ.ತ್ರಿಪಾಠಿ ಅವರಿಗೆ ಸುಮಾರು ಒಂದು ತಿಂಗಳ ಹಿಂದೆ ಕೋವಿಡ್-19 ವೈರಸ್ ಸೋಂಕು ದೃಢಪಟ್ಟಿತ್ತು. ಅಂದಿನಿಂದ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು.

ಅವರ ಆರೋಗ್ಯ ಮತ್ತಷ್ಟು ವಿಷಮಗೊಂಡ ಕಾರಣ ಅವರನ್ನು ಕಳೆದ ಮೂರು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿರಿ ನಿಗಾ ವಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿನ್ನೆ ಕೊನೆಯುಸಿರೆಳೆದರು.

ಛತ್ತೀಸ್‍ಗಢ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅವರು ಲೋಕಪಾಲ್‍ನ ನಾಲ್ವರು ಹಿರಿಯ ಸದಸ್ಯರಲ್ಲಿ ಒಬ್ಬರಾಗಿ ಕಾರ್ಯನಿರ್ವಹಿಸುತ್ತಿದ್ದರು.

Facebook Comments

Sri Raghav

Admin