ವಿವಾದಿತ ಹೇಳಿಕೆಗಳಿಂದ ಸುದ್ದಿಯಾಗಿದ್ದ ಪ್ರಗ್ಯಾಸಿಂಗ್‍ಗೆ ಗೆಲುವು

ಈ ಸುದ್ದಿಯನ್ನು ಶೇರ್ ಮಾಡಿ

ಭೋಪಾಲ್, ಮೇ 23-ಲೋಕಸಭಾ ಚುನಾವಣೆಯಲ್ಲಿ ವಿವಾದದ ಕೇಂದ್ರಬಿಂದುವಾಗಿದ್ದ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಮತ್ತು ಬಿಜೆಪಿ ಅಭ್ಯರ್ಥಿ ಪ್ರಗ್ಯಾಸಿಂಗ್ ಠಾಕೂರ್ ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದಿಂದ ಜಯ ಸಾಧಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಧುರೀಣ, ಮಾಜಿ ಮುಖ್ಯಮಂತ್ರಿ ದಿಗ್ವಿಜಯ್‍ಸಿಂಗ್‍ರನ್ನು ಮಣಿಸಿದ ಪ್ರಗ್ಯಾ ಮತ್ತೊಮ್ಮೆ ಲೋಕಸಭೆಗೆ ಪ್ರವೇಶಿಸಿದ್ದಾರೆ. ಭೋಪಾಲ್ ಕ್ಷೇತ್ರದಿಂದ ಗೆಲುವು ಸಾಧಿಸಲು ದಿಗ್ವಿಜಯ್‍ಸಿಂಗ್ ನಡೆಸಿದ್ದ ಭಾರೀ ಕಸರತ್ತು ಈಡೇರಲಿಲ್ಲ. [ LOKSABHA ELECTIONS 2019 RESULT – Live Updates]

ರಾಷ್ಟ್ರಪಿತ ಮಹಾತ್ಮಗಾಂಧಿಯವರನ್ನು ಹತ್ಯೆ ಮಾಡಿದ ನಾತೂರಾಮ್‍ಗೋಡ್ಸೆ ಮಹಾನ್ ದೇಶಭಕ್ತ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಪ್ರಗ್ಯಾಸಿಂಗ್ ಬಿಜೆಪಿಗೆ ತೀವ್ರ ಇರಿಸುಮುರಿಸು ಉಂಟು ಮಾಡಿ ಮುಖಂಡರ ಆಕ್ರೋಶಕ್ಕೂ ಗುರಿಯಾಗಿದ್ದರು.

ಗಾಂಧಿಗೆ ಅಪಮಾನ ಮಾಡಿದ ಪ್ರಗ್ಯಾಸಿಂಗ್‍ರನ್ನು ತಾವು ಕ್ಷಮಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ವಿವಾದಾತ್ಮಕ ಹೇಳಿಕೆಗೆ ಪ್ರತ್ಯುತ್ತರ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನೋಟಿಸ್ ಸಹ ಜಾರಿಗೊಳಿಸಿದ್ದರು.  ಈ ಎಲ್ಲಾ ವಿವಾದಗಳ ನಡುವೆಯೂ ಪ್ರಗ್ಯಾಸಿಂಗ್ ಭೋಪಾಲ್‍ನಲ್ಲಿ ಜಯ ಸಾಧಿಸಿ ಸಂಭ್ರಮಿಸಿದ್ದಾರೆ. [ LOKSABHA ELECTIONS 2019 RESULT – Live Updates]

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin