ಬೈಕ್‍ಗೆ ಲಾರಿ ಡಿಕ್ಕಿ: ಇಬ್ಬರು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ, ಜೂ. 20- ಬೈಕ್‍ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ವಾಲ್ಕಾನಾಯ್ಕ(45), ಸಮಿಬಾಯಿ(44) ಮೃತಪಟ್ಟ ಸವಾರರು.

ಇಬ್ಬರು ಬೈಕ್‍ನಲ್ಲಿ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದಾಗ, ಕುಂಚೇನಹಳ್ಳಿ ಗ್ರಾಮದ ಬಳಿ ಲಾರಿಯೊಮದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುದ್ದಿತಿಳಿಯತ್ತಿದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಗ್ರಾಮಾಂತರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments