ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ, ಅ.14- ಕೋಳಿ ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ ಮರಳಿಗ ಗ್ರಾಮದಲ್ಲಿ ನಡೆದಿದೆ. ಕೀಳಘಟ್ಟ ಗ್ರಾಮದ ಗಿರೀಶ್ ಶೆಟ್ಟಿ (50) , ಎನ್.ಕೋಡಿಹಳ್ಳಿ ಗ್ರಾಮದ ಲೋಕೇಶ್ (44) ಮೃತಪಟ್ಟ ದುರ್ದೈವಿಗಳು.

ಇಂದು ಬೆಳಗ್ಗೆ ಗ್ರಾಮದ ನಿಂಗೇಗೌಡ ಎಂಬುವರಿಗೆ ಸೇರಿದ ಕೋಳಿ ಅಂಗಡಿ ಮುಂದೆ ಕುಳಿತಿದ್ದಾಗ ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಅಂಗಡಿ ಕಡೆ ನುಗ್ಗಿದ ಪರಿಣಾಮ ಗಿರೀಶ್ ಶೆಟ್ಟಿ ಹಾಗೂ ಲೋಕೇಶ್ ಲಾರಿ ಅಡಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಆಯುಧಪೂಜೆ ದಿನವೇ ಇಂತಹ ಘಟನೆ ನಡೆದಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಬೆಸಗರಹಳ್ಳಿ ಠಾಣೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook Comments