ಮಸೀದಿಗಳ ಧ್ವನಿವರ್ಧಕಗಳನ್ನು ತೆಗೆಯುವಂತೆ ಸೂಚನೆ ಕೊಟ್ಟಿಲ್ಲ : ಪೊಲೀಸರ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.6-ಮಸೀದಿಗಳಲ್ಲಿರುವ ಧ್ವನಿವರ್ಧಕಗಳನ್ನು ತೆಗೆಯುವಂತೆ ಯಾವುದೇ ನಿರ್ದೇಶನವನ್ನು ಪೊಲೀಸ್ ಇಲಾಖೆಯಿಂದ ನೀಡಿರುವುದಿಲ್ಲ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ಸ್ಪಷ್ಟಪಡಿಸಿದೆ.  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ದೇಶನವನ್ನು ನೀಡಿಲ್ಲ. ಸಾರ್ವಜನಿಕರು ಇಂತಹ ಗಾಳಿ ಸುದ್ದಿಗೆ ಗಮನ ಕೊಡಬಾರದು ಎಂದು ಕೋರಲಾಗಿದೆ.

ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆಯಲು ಉದ್ದೇಶಿಸಿರುವ ಬಗ್ಗೆ ಡಿಜಿ ಮತ್ತು ಐಜಿಪಿಯವರು ಹೊರಡಿಸಿದ್ದೆಂದು ಹೇಳಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದರಿಂದ ಈ ಸ್ಪಷ್ಟನೆ ನೀಡಲಾಗಿದೆ.

ಹಿರಿಯ ಅಧಿಕಾರಿಗಳ ಒಪ್ಪಿಗೆ ಇಲ್ಲದೆ ಕ್ಲರ್ಕ್‍ಗಳು, ರಾಜ್ಯ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಎಸ್ಪಿಗಳಿಗೆ ವಕೀಲರೊಬ್ಬರು ಧ್ವನಿವರ್ಧಕ ನಿಷೇಧಿಸುವಂತೆ ಕೋರಿದ್ದ ಪತ್ರ ಕಳುಹಿಸಿದ್ದಾರೆ. ಈ ಸಂಬಂಧ ವಿಚಾರಣೆ ನಡೆಸಲು ಕೂಡ ಆದೇಶಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Facebook Comments