ಪ್ರಿಯಕರನ ಸಾವಿನ ಸುದ್ದಿ ಕೇಳಿ ಪ್ರಿಯತಮೆ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಚಾಮರಾಜನಗರ,ಸೆ.17- ಅಪಘಾತದಲ್ಲಿ ಪ್ರಿಯಕರ ಮೃತಪಟ್ಟಿರುವ ಸುದ್ದಿ ಕೇಳಿ ಮನನೊಂದು ಪ್ರೇಯಸಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಂಡಿಗೆರೆ ಗ್ರಾಮದಲ್ಲಿ ನಡೆದಿದೆ. ಪೂಜಾ ಆತ್ಮಹತ್ಯೆ ಮಾಡಿಕೊಂಡ ಪ್ರೇಯಸಿ.

ಚಂದುಕಟ್ಟೆಮೊಳೆ ಗ್ರಾಮದ ಮಹೇಶ್ ಹಾಗೂ ಪೂಜಾ ಪರಸ್ಪರ ಪ್ರೀತಿಸುತ್ತಿದ್ದು, ಬುಧವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಪ್ರಿಯಕರ ಮಹೇಶ್ ಮೃತಪಟ್ಟಿದ್ದು, ಈ ವಿಷಯ ತಿಳಿದ ಕೂಡಲೇ ಪೂಜಾ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಚಾಮರಾಜನಗರ ಪೂರ್ವ ಠಾಣೆಯ ಈ ಸಂಬಂಧ ಪ್ರಕರಣ ದಾಖಲಾಗಿದೆ.

Facebook Comments