Thursday, March 28, 2024
Homeರಾಷ್ಟ್ರೀಯತಿಂಗಳಾರಂಭದಲ್ಲೇ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ತಿಂಗಳಾರಂಭದಲ್ಲೇ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ನವದೆಹಲಿ,ಫೆ.1- ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಗ್ರಾಹಕರಿಗೆ ಸರ್ಕಾರ ಶಾಕ್ ನೀಡಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ 14 ರೂಪಾಯಿ ಏರಿಕೆ ಮಾಡಲಾಗಿದೆ. ಇದರಿಂದಾಗಿ ಗ್ರಾಹಕರಿಗೆ ಬೆಲೆ ಏರಿಕೆಯ ಬರೆ ಏಳೆದಂತಾಗಿದೆ.

ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್‍ಗಳ ಪರಿಷ್ಕøತ ಬೆಲೆ ಇಂದಿನಿಂದಲೇ ಅನ್ವಯವಾಗಲಿದೆ. ಕಳೆದ ತಿಂಗಳು ಕೂಡ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ತುಸು ಹೆಚ್ಚಳ ಮಾಡಿದ್ದವು.

ಬೆಲೆ ಹೆಚ್ಚಳದ ಬಳಿಕ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1769.50 ರೂ. ತಲುಪಿದೆ. ಕೋಲ್ಕತ್ತಾದಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1887.00 ರೂ.ಗೆ ತಲುಪಿದೆ. ಮುಂಬೈನಲ್ಲಿ 1723.50 ರೂ., ಚೆನ್ನೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1937 ರೂ.ಗೆ ತಲುಪಿದೆ. ಕಳೆದ ಮೂರು ವರ್ಷಗಳಲ್ಲಿ ಗೃಹಬಳಕೆಯ ಸಿಲಿಂಡರ್‍ಗಳ ದರ 17 ಬಾರಿ ಬದಲಾಗಿದ್ದು, ವಾಣಿಜ್ಯ ಸಿಲಿಂಡರ್‍ಗಳ ದರ ಬಹುತೇಕ ಪ್ರತಿ ತಿಂಗಳು ಬದಲಾಗುತ್ತಿದೆ.

ಈ ಬದಲಾವಣೆಗಳಿಂದಾಗಿ, ಕೆಲವೊಮ್ಮೆ ಗ್ರಾಹಕರಿಗೆ ಪ್ರಯೋಜನವಾದರೆ ಇನ್ನು ಕೆಲವೊಮ್ಮೆ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಐಒಸಿ ಅಂಕಿಅಂಶಗಳ ಪ್ರಕಾರ, ಜನವರಿ 1, 2021 ರಂದು ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1,349 ರೂ ಇತ್ತು. ಅಂದಿನಿಂದ ಸುಮಾರು 50 ಬಾರಿ ದರ ಪರಿಷ್ಕರಣೆಯಾಗಿದೆ.

ಸ್ನೇಹಿತನ ವಿರುದ್ದ ಅತ್ಯಾಚಾರ ಆರೋಪ ಮಾಡಿದ ಬಿಗ್‍ಬಾಸ್ ಸ್ಪರ್ಧಿ

ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಸತತ 6ನೇ ಬಾರಿ ಯಾವುದೇ ಬದಲಾವಣೆಯಾಗಿಲ್ಲ. ಆಗಸ್ಟ್ 30 ರಂದು ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕೊನೆಯ ಬಾರಿ ಬದಲಾವಣೆ ಮಾಡಲಾಗಿತ್ತು. ಅಂಕಿಅಂಶಗಳ ಪ್ರಕಾರ, ದೇಶದ ರಾಜಧಾನಿ ದೆಹಲಿಯಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 903 ರೂ., ಕೋಲ್ಕತ್ತಾದಲ್ಲಿ 929 ರೂ., ಮುಂಬೈಯಲ್ಲಿ 902.50 ರೂ., ಚೆನ್ನೈನಲ್ಲಿ 918.50 ರೂ. ಇದೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾಪೆರ್ರೇಷನ್, ಭಾರತ್ ಪೆಟ್ರೋಲಿಯಂ ಕಾಪೆರ್ರೇಷನ್ ಲಿಮಿಟೆಡ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾಪೆರ್ರೇಷನ್ ಲಿಮಿಟೆಡ್ ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಮಾರುಕಟ್ಟೆ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್‌ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ.

RELATED ARTICLES

Latest News