ಲಗೇಜ್ ಆಟೋಗೆ ಕಾರು ಡಿಕ್ಕಿ: ಮಹಿಳೆ ಮತ್ತು ಮಗು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ,ಜ.5- ಕಾರು ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಹಾಗೂ ಮಗು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಹೊಸದುರ್ಗ ತಾಲ್ಲೂಕಿನ ನೀರಗುಂದ ಪೀಲಾಪುರ ಗೇಟ್ ಬಳಿ ನಡೆದಿದೆ. ಮೃತರನ್ನು ಹೊನ್ನೆಕೇರಿ ಗೊಲ್ಲರಹಟ್ಟಿಯ ಕರಿಯಮ್ಮ(50) ಧನುಷ್ (3) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ರಾಜು, ಲತಾ ಎಂಬುವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತರೀಕೆರೆ ತಾಲೂಕಿನ ತೀರು ಮುರುಡಿ ದೇವಸ್ಥಾನಕ್ಕೆ ಹೋಗಿ ಜವಳ (ತಲೆ ಕೂದಲು) ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಎಲ್ಲರೂ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಹೊಸದುರ್ಗ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments