ಬಿಜೆಪಿ ಕಚೇರಿಯಲ್ಲಿ ಲಿಂಗಾಯತರಿಗೆ ನಿರ್ಬಂಧ : ಎಂ.ಬಿ.ಪಾಟೀಲ್ ಅಸಮಾಧಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.15- ಬಿಜೆಪಿಗೆ ಕಚೇರಿಗೆ ಲಿಂಗಾಯಿತ ಸಮುದಾಯದ ಕಾರ್ಯಕರ್ತರು ಬರಬೇಡಿ ಎಂದು ಹೇಳಿರುವುದು ದುರದೃಷ್ಟಕರ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಕಚೇರಿಗೆ ಯಾವುದೇ ಸಮುದಾಯದವರನ್ನು ಬರಬೇಡಿ ಎಂದು ಹೇಳುವುದು ಸರಿಯಲ್ಲ. ಒಂದು ವೇಳೆ ಬಿಜೆಪಿ ನಾಯಕರು ಆ ರೀತಿ ನಡೆದುಕೊಂಡಿದ್ದರು ಅದು ಅಕ್ಷಮ್ಯ ಎಂದರು.

ಹೊಸಜಿಲ್ಲೆಗಳ ರಚನೆಗೆ ಬೇಡಿಕೆಗಳು ಹೆಚ್ಚಾಗುತ್ತಿವೆ. ಬಹಳಷ್ಟು ಕಡೆ ಜಿಲ್ಲೆಗಳ ರಚನೆಗೆ ಒತ್ತಡಗಳು ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮಿತಿ ರಚನೆ ಮಾಡಬೇಕು. ಸ್ಥಳೀಯರ ಅಭಿಪ್ರಾಯ ಪಡೆದು ನಂತರ ನಿರ್ಧಾರ ತೆಗೆದುಕೊಳ್ಳಬೇಕ ಎಂದು ಒತ್ತಾಯಿಸಿದರು.  ಯಡಿಯೂರಪ್ಪ ಅವರನ್ನು ಬಿಜೆಪಿಯಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಆರೋಪದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಅವರು ಹಿರಿಯ ನಾಯಕರು. ಅವರಿಗೆ ಅನ್ಯಾಯ ಆಗಿದೆಯೋ ಇಲ್ಲವೋ ಎಂಬುದನ್ನು ಅವರೇಹೇಳಬೇಕು. ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ರಾಜ್ಯ ಸರ್ಕಾರ ಮಾಧ್ಯಮಗಳಿಗೆ ಕಡಿವಾಣ ಹಾಕಿದ್ದು ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ ಯಲ್ಲಿ ಮಾಧ್ಯಮಗಳಿಗೆ ದೊಡ್ಡ ಪಾತ್ರವಿದೆ. ಪ್ರವಾಹ ಸಂದರ್ಭದಲ್ಲಿ ಲಕ್ಷಾಂತರ ಜನ ಬೀದಿಪಾಲಾಗಿದ್ದರು. ಅವರ ಕಣ್ಣೀರು ಒರೆಸುವ ಕೆಲಸವನ್ನು ಮಾಧ್ಯಮಗಳು ಮಾಡಿವೆ. ಅವುಗಳ ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನಗಳನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದರು.

ಸರ್ಕಾರಿ ಕಾರ್ಯಕ್ರಮಗಳಿಗೆ ಮಾಧ್ಯಮ ದವರನ್ನು ನಿಷೇಧಿಸಿರುವುದು ಯಾವ ಕಾರಣಕ್ಕೆ ಎಂಬುದು ಗೊತ್ತಿಲ್ಲ.ಈ ರೀತಿಯ ಸಲಹೆಗಳನ್ನು ಅವರಿಗೆ ಯಾರೂ ನೀಡುತ್ತಾರೋ ಎಂಬ ಗೊಂದಲ ಕಾಡುತ್ತಿದೆ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯಬೇಕಿತ್ತು. ಹವಾಮಾನ ಕೆಟ್ಟಿರುವುದರಿಂದ ಬೆಂಗಳೂರಿನಲ್ಲಿ ಅಧಿವೇಶನ ನಡೆಸಲಾಗಿದೆ ಎಂದು ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ