ದೆಹಲಿಯಲ್ಲಿ ರಾಹುಲ್ ಭೇಟಿ ನಂತರ ಎಂ.ಬಿ.ಪಾಟೀಲ್ ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

M-B-Patil
ನವದೆಹಲಿ, ಜೂ.9- ನನ್ನ ಭಾವನೆಗಳನ್ನು ಎಐಸಿಸಿ ಅಧ್ಯಕ್ಷರಾದ ರಾಹುಲ್‍ಗಾಂಧಿ ಅವರಿಗೆ ತಿಳಿಸಿದ್ದೇನೆ. ಅವರು ತೆಗೆದುಕೊಳ್ಳುವ ನಿರ್ಧಾರವನ್ನು ಕಾದು ನೋಡುತ್ತೇನೆ ಎಂದು ಅತೃಪ್ತ ಶಾಸಕರ ಬಣದಲ್ಲಿ ಒಬ್ಬರಾದ ಎಂ.ಬಿ.ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ. ನಾನು ಒಂಟಿ ಅಲ್ಲ, ನನ್ನ ಜತೆ ಇನ್ನೂ ಹಲವು ಶಾಸಕರಿದ್ದು, ಅವರೂ ಕೂಡ ಇದೇ ರೀತಿ ಮನನೊಂದಿದ್ದಾರೆ. ಬೆಂಗಳೂರಿಗೆ ತೆರಳಿದ ನಂತರ ಅವರೊಂದಿಗೆ ಚರ್ಚಿಸಿ ಹೈಕಮಾಂಡ್ ಜತೆ ನಡೆದ ಚರ್ಚೆಯನ್ನು ವಿವರಿಸುತ್ತೇನೆ. ನಂತರ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.

ಇಂದು ನಡೆದ ಸಭೆಯಲ್ಲಿ ನಾನು ನನ್ನೆಲ್ಲ ಅನಿಸಿಕೆಗಳನ್ನು ಹೈಕಮಾಂಡ್ ಮುಂದಿಟ್ಟಿದ್ದು, ರಾಜ್ಯ ರಾಜಕೀಯದ ಸಮಗ್ರ ವಿವರಣೆ ನೀಡಿದ್ದೇನೆ. ನಾವು ಪಕ್ಷದ ವಿರುದ್ಧ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿಲ್ಲ. ಪಕ್ಷ ಸಂಘಟಿಸುವುದು ನಮ್ಮ ಮೂಲ ಧ್ಯೇಯ. ಸಂಪುಟ ವಿಸ್ತರಣೆ ನಂತರ ಎದುರಾಗಿರುವ ವ್ಯತ್ಯಾಸಗಳನ್ನು ಸರಿಪಡಿಸಬೇಕು ಎಂದು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin