ಕಂಟೈನ್ಮೆಂಟ್ ವಲಯದ ಪ್ರತಿಯೊಬ್ಬರನ್ನು ಪರೀಕ್ಷೆಗೊಳಪಡಿಸಲು ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು,ಜೂ.30- ಕಂಟೈನ್‍ಮೆಂಟ್ ವಲಯದಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್ ತಪಾಸಣೆ ನಡೆಸಬೇಕು ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಜಿಲ್ಲಾಡಳಿತಕ್ಕೆ ಸೂಚಿಸಿದರು.

ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಕೋವಿಡ್ ಸಂಬಂಧಿಸಿದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಕೋವಿಡ್-19ರ ಪ್ರಕರಣಗಳು ಹೆಚ್ಚಾಗುತ್ತಿವೆ.

ಆದುದರಿಂದ ಕಂಟೈನ್ಮೆಂಟ್ ವಲಯದಲ್ಲಿರುವ ಪ್ರತಿಯೊಬ್ಬರನ್ನೂ ತಪಾಸಣೆಗೊಳಪಡಿಸಿ ಜಿಲ್ಲಾಸ್ಪತ್ರೆಯಲ್ಲಿ ಆರ್‍ಟಿಪಿಎಸ್‍ಆರ್ ಪ್ರಯೋಗಾಲಯವಿರುವುದರಿಂದ ಹೆಚ್ಚಿನ ಪರೀಕ್ಷೆ ನಡೆಸಲು ಅನುಕೂಲವಾಗುತ್ತದೆ ಎಂದರು.  ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ಗೊಲ್ಲರಹಟ್ಟಿ ಗ್ರಾಮದ ಸೋಂಕಿತ ಕುರಿಗಳನ್ನು ಮೇಯಿಸುತ್ತಿದ್ದು, ಆತನ 40 ಕುರಿಗಳನ್ನು ಪ್ರತ್ಯೇಕವಾಗಿರಿಸಲಾಗಿದೆ.

ಈ ಕುರಿಗಳ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿ ತಪಾಸಣೆ ಮಾಡಿಸುವಂತೆ ಪಶು ವೈದ್ಯಕೀಯ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿರುವ ಬಹುತೇಕ ಸೋಂಕಿತರಿಗೆ ಸೋಂಕಿನ ಲಕ್ಷಣಗಳೇ ಕಂಡುಬಂದಿಲ್ಲ. ಈ ಪೈಕಿ 8 ಮಂದಿಗೆ ಮಾತ್ರ ಸೋಂಕಿನ ಲಕ್ಷಣಗಳು ಕಂಡುಬಂದಿವೆ.

ಸೋಂಕಿನ ಲಕ್ಷಣಗಳಿಲ್ಲದವರನ್ನು ಕೋವಿಡ್ ಕೇರ್ ಸೆಂಟರ್‍ಗೆ ಸ್ಥಳಾಂತರಿಸಲು ಅವಕಾಶವಿದ್ದು, ತುಮಕೂರು ನಗರದ ಹೊರ ವಲಯದಲ್ಲಿರುವ ಟ್ರಕ್‍ಟರ್ಮಿಲ್ ಸಮೀಪದ ಕಟ್ಟಡಕ್ಕೆ ಎರಡ್ಮೂರು ದಿನಗಳಲ್ಲಿ ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ತಿಳಿಸಿದರು.

ಸಭೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು, ನಿಯಂತ್ರಣ ಕ್ರಮಗಳು, ಮತ್ತಿತರ ಮಾಹಿತಿಯನ್ನು ಡಿಹೆಚ್‍ಓ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕರಿಂದ ಸಚಿವರು ಪಡೆದರು. ಸಂಸದರಾದ ಜಿ.ಎಸ್.ಬಸವರಾಜು, ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಉದೇಶ್, ಉಪವಿಭಾಗಾಧಿಕಾರಿ ಅಜಯ್, ಜಿಲ್ಲಾ ಶಸ್ತ್ರಚಿಕಿತ್ಸಕ ವೀರಭದ್ರಯ್ಯ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

Facebook Comments